ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ : ಗ್ರಾಮೀಣ ಬ್ಯಾಂಕ್‌ಗಳಲ್ಲಿ 580 ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜೂನ್ 20 : ಬ್ಯಾಂಕ್ ಸಿಬ್ಬಂದಿ ಮತ್ತು ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದ 45 ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 8,400 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 4ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಐಬಿಪಿಎಸ್ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) 3688, ಆಫೀಸರ್ ಸ್ಕೇಲ್ -1 3381, ಆಫೀಸರ್ ಸ್ಕೇಲ್ -2 1,174 ಮತ್ತು ಆಫೀಸರ್ ಸ್ಕೇಲ್ -3 157 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

8400 ಹುದ್ದೆಗೆ ಅರ್ಜಿ ಕರೆದ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ 8400 ಹುದ್ದೆಗೆ ಅರ್ಜಿ ಕರೆದ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ

ಕರ್ನಾಟಕದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 18 ರಿಂದ ಜುಲೈ 4ರ ತನಕ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಖಾಲಿ ಇದೆ

ಕರ್ನಾಟಕದಲ್ಲಿ ಒಟ್ಟು 580 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು www.ibps.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ನೇಮಕಾತಿ ಆದೇಶವನ್ನು ಸ್ಪಷ್ಟವಾಗಿ ಓದಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಬಾಗಲಕೋಟೆ : 58 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಹಾಕಿಬಾಗಲಕೋಟೆ : 58 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಹಾಕಿ

ಹುದ್ದೆಗಳ ವಿವರ ಇಲ್ಲಿವೆ

ಹುದ್ದೆಗಳ ವಿವರ ಇಲ್ಲಿವೆ

ಕರ್ನಾಟಕದಲ್ಲಿ 580 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಫೀಸ್ ಅಸಿಸ್ಟೆಂಟ್ ಹುದ್ದೆ 238, ಆಫೀಸರ್ ಸ್ಕೇಲ್ -1ರ 266 ಹುದ್ದೆಗಳು, ಆಫೀಸರ್ ಸ್ಕೇಲ್ -2ರ 76 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ ವಿವರಗಳು

ವಿದ್ಯಾರ್ಹತೆ ವಿವರಗಳು

ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಆದರೆ, ಸ್ಥಳೀಯ ಭಾಷೆಯನ್ನು ತಿಳಿದಿರಬೇಕಾಗಿದೆ. ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವ ಜ್ಞಾನ ಹೊಂದಿರಬೇಕು.

ಆಫೀಸರ್ ಸ್ಕೇಲ್ -1 : ಕೃಷಿ, ತೋಟಗಾರಿಕೆ, ಅರಣ್ಯ, ಪ್ರಾಣಿಶಾಸ್ತ್ರ, ಪಶು ವಿಜ್ಞಾನ, ಅಗ್ರಿಕಲ್ಚರ್ ಇಂಜಿನಿಯರಿಂಗ್, ಅಗ್ರಿಕಲ್ಚರ್ ಮಾರ್ಕೆಟಿಂಗ್ ಅಂಡ್ ಕೋ-ಆಪರೇಷನ್, ಇನ್‌ಫರ್‌ಮೇಷನ್ ಟೆಕ್ನಾಲಜಿ, ಮ್ಯಾನೇಜ್‌ ಮೆಂಟ್ ಲಾ, ಅರ್ಥಶಾಸ್ತ್ರ ಮತ್ತು ಲೆಕ್ಕಶಾಸ್ತ್ರ ಈ ವಿಷಯಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

ಆಫೀಸರ್ ಸ್ಕೇಲ್ - 2

ಆಫೀಸರ್ ಸ್ಕೇಲ್ - 2

ಆಫೀಸರ್ ಸ್ಕೇಲ್ - 2 ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿವಿಯಿಂದ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರುವುದು ಕಡ್ಡಾಯ. ಯಾವುದೇ ಹಣಕಾಸು ಸಂಸ್ಥೆ ಅಥವ ಬ್ಯಾಂಕ್‌ಗಳಲ್ಲಿ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು. ಆಫೀಸರ್ ಸ್ಕೇಲ್‌ 2ನೇ ಸ್ಪೆಷಲಿಸ್ಟ್ ಆಫೀಸರ್‌ಗಳಾದ ಇನ್‌ಫಾರ್ಮಮೇಷನ್ ಆಫೀಸರ್, ಚಾರ್ಟೆಡ್ ಅಕೌಂಟೆಂಟ್, ಲಾ ಆಫೀಸರ್, ಟ್ರೆಸರಿ ಆಫೀಸರ್, ಮಾರ್ಕೆಟಿಂಗ್ ಆಫೀಸರ್ ಮತ್ತು ಅಗ್ರಿ ಕಲ್ಚರ್ ಆಫೀಸರ್ ಹುದ್ದೆಗಳಿಗೆ ಪದವಿ ಮತ್ತು ಒಂದು ವರ್ಷದ ಸೇವಾನುಭವ ಹೊಂದಿರಬೇಕು.

ಅರ್ಜಿ ಶುಲ್ಕದ ವಿವರ

ಅರ್ಜಿ ಶುಲ್ಕದ ವಿವರ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ. ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ಕೇಂದ್ರಗಳು

ಪರೀಕ್ಷಾ ಕೇಂದ್ರಗಳು

ಪೂರ್ವಭಾವಿ ಪರೀಕ್ಷೆಗಳು ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.

ಮುಖ್ಯ ಪರೀಕ್ಷೆಗಳು : ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಯಲಿವೆ.

English summary
Institute of Banking Personnel Selection (IBPS) recruitment 2019. Apply for 580 post in Karnataka. The candidate who is looking for Office Assistant, Officer can apply online before 04-07-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X