8400 ಹುದ್ದೆಗೆ ಅರ್ಜಿ ಕರೆದ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ
ಬೆಂಗಳೂರು, ಜೂನ್ 19 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ 8400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 4/7/2019 ಕೊನೆಯ ದಿನವಾಗಿದೆ.
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
ಯಾವುದೇ ಪದವಿ, ಎಂಬಿಎ, ಸಿಎ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು.
ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಇತರ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications