ಐಬಿಪಿಎಸ್ ನೇಮಕಾತಿ: 647 ವಿಶೇಷ ಅಧಿಕಾರಿ ಹುದ್ದೆಗಳಿವೆ

ನವದೆಹಲಿ, ನ. 4: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. 647 ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ನವೆಂಬರ್ 23ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)

ಹುದ್ದೆ ಹೆಸರು: Specialist Officer

ಒಟ್ಟು ಹುದ್ದೆ: 647

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 23, 2020

IBPS Recruitment 2020 apply for 647 Specialist Officer Post

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:
ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ.

ವಯೋಮಿತಿ ವಿನಾಯಿತಿ:
ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ: 3 ವರ್ಷ
ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ
ಅಂಗವಿಕಲ ಅಭ್ಯರ್ಥಿ: 10 ವರ್ಷ.

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿ: 600 ರು
ಎಸ್ ಸಿ, ಎಸ್ಟಿ ಅಭ್ಯರ್ಥಿ: 100 ರು

ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/11/2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23/11/2020

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+