IBPS ನೇಮಕಾತಿ 2021: 10676 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 8: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆಫೀಸರ್, ಸಹಾಯಕ ಅಧಿಕಾರಿ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜೂನ್ 28ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)

ಹುದ್ದೆ ಹೆಸರು: Office Assistant, Officer Scale

ಒಟ್ಟು ಹುದ್ದೆ: 10676

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜೂನ್ 28, 2021

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಎಂಬಿಎ, ಸಿಎ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

IBPS Recruitment 2021 apply for 10676 Various Officer Post

ವಯೋಮಿತಿ: ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ, ಒಬಿಸಿ ಅಭ್ಯರ್ಥಿಗೆ 3 ವರ್ಷ, ಎಸ್ ಸಿ/ ಎಸ್ಟಿ ಅಭ್ಯರ್ಥಿ 5 ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷ ತನಕ ವಯೋಮಿತಿಯಲ್ಲಿ ವಿನಾಯಿತಿ ಇರಲಿದೆ.

ಅರ್ಜಿ ಶುಲ್ಕ:
* ಸಾಮಾನ್ಯ/ಒಬಿಸಿ/ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರು 850/-
*ಎಸ್ ಸಿ/ ಎಸ್ಟಿ ಅಭ್ಯರ್ಥಿ/ ದಿವ್ಯಾಂಗ: 175 ರು

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08-06-2021
ಆನ್‌ಲೈನ್‌ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28-06-2021

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+