IBPS Recruitment 2023: ಬ್ಯಾಂಕಿಂಗ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಜು.28ರವರೆಗೆ ವಿಸ್ತರಣೆ
ಬೆಂಗಳೂರು, ಜುಲೈ 25: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ (IBPS) ವಿವಿಧ ಬ್ಯಾಂಕ್‌ಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿ ಅರ್ಹರಿಂದ ಅರ್ಜಿ ಆಹ್ವಾನಿಸಿತ್ತು. ಆಗ ಜುಲೈ 21ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವೆಂದು ಹೇಳಲಾಗಿತ್ತು. ಇದೀಗ ಆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಐಬಿಪಿಎಸ್ ಸಂಸ್ಥೆಯು 2024-25 ನೇ ಸಾಲಿಗೆ ನೇಮಕಾತಿ ಮಾಡಿಕೊಳ್ಳಲು ದೇಶಾದ್ಯಂತ ವಿವಿಧ ಬ್ಯಾಂಕ್‌ಗಳ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುವುದಾಗಿ ಅಧಿಸೂಚನೆ ಹೊರಡಿಸಿತು. ವಿವಿಧ ಬ್ಯಾಂಕ್ಗಳಲ್ಲಿ ಖಾಲಿ ಇರುವ 4545 ಕ್ಲರ್ಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಬ್ಯಾಂಕಿಂಗ್ ವಲಯದ ಈ ಉದ್ಯೋಗವಕಾಶ ಸದುಪಯೋಗ ಪಡಿಸಿಕೊಳ್ಳುವ ನಿಟ್ಟನಲ್ಲಿ ಆಸಕ್ತರು ಕೂಡಲೇ ಅರ್ಜಿ ಹಾಕಬೇಕಿದೆ.

ಅರ್ಜಿ ಸಲ್ಲಿಕೆ ಈ ಮೊದಲು ಇದೇ ತಿಂಗಳ ಜುಲೈ 21 ದಿನವೇ ದಿನ ಎನ್ನಲಾಗಿತ್ತು, ಇದೀಗ ಆ ದಿನಾಂಕವನ್ನು ಜುಲೈ 28ರವರೆಗೆ ವಿಸ್ತರಣೆ ಮಾಡಲಾಗಿದೆ. ಜೂನ್ 30ರಂದು ನೋಟಿಫಿಕೇಶನ್ ಬಿಡುಗಡೆ ಆಗಿದೆ. ಜುಲೈ 1ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಜುಲೈ 28ರೊಳಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದ್ದು, ಕರ್ನಾಟಕದಲ್ಲಿ 253 ಹುದ್ದೆಗಳು ಖಾಲಿ ಇವೆ ಎಂದು ಸಂಸ್ಥೆ ತಿಳಿಸಿದೆ.
ಕರ್ನಾಟಕದಲ್ಲಿ ಖಾಲಿ ಇರುವ 253 ಹುದ್ದೆಗಳ ಪೈಕಿ ಪಂಜಾಬ್ ಮತ್ತು ಸಿಂದ್ ಬ್ಯಾಂಕ್- 9, ಪಂಜಾಬ್ ನ್ಯಾಷನಲ್ ಬ್ಯಾಂಕ್- 15, ಬ್ಯಾಂಕ್ ಆಫ್ ಇಂಡಿಯಾ- 3, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ- 61 ಮತ್ತು
ಕೆನರಾ ಬ್ಯಾಂಕ್- 165 ಖಾಲಿ ಹುದ್ದೆಗಳು ಇವೆ. ಅರ್ಜಿ ಸಲ್ಲಿಕೆಗೂ ಮುನ್ನ ಪೂರ್ಣ ಮಾಹಿತಿ ತಿಳಿಯಿರಿ.
ಹುದ್ದೆಗಳ ಸಂಪೂರ್ಣ ವಿವರ
ಹುದ್ದೆ ಹೆಸರು - ಕ್ಲರ್ಕ್
ಒಟ್ಟು ಹುದ್ದೆ -4545
ಕರ್ನಾಟಕದಲ್ಲಿನ ಖಾಲಿ ಹುದ್ದೆ - 253
ಉದ್ಯೋಗದ ಸ್ಥಳ - ಭಾರತ

ಶೈಕ್ಷಣಿಕ ಅರ್ಹತೆ ಏನಿರಬೇಕು
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು ಎಂದು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ - ಸಡಿಲಿಕೆ ವಿವರ
ಬ್ಯಾಂಕಿಂಗ್ ಹುದ್ದೆಯಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 2023ರ ಜುಲೈ 1ಕ್ಕೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ಆಗಿರಬೇಕು ಎಂದು ತಿಳಿಸಲಾಗಿದೆ. ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ (NCL) ಅಭ್ಯರ್ಥಿಗಳಿಗೆ ಮೂರು ವರ್ಷ, PWBD ಅಭ್ಯರ್ಥಿಗಳೀಗೆ ಹತ್ತು ವರ್ಷ ಹಾಗು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 8 ವರ್ಷ ಸಡಿಲಿಕೆ ಇರಲಿದೆ.
ವೇತನ ಮತ್ತು ಅರ್ಜಿ ಶುಲ್ಕ
ವೇತನವನ್ನು ನಿಯಮಾನುಸಾರ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಇನ್ನೂ SC/ST/PWBD/ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ 175 ರೂ. ನಿಗದಿಯಗಿದ್ದರೆ, ಉಳಿದ ಎಲ್ಲ ಅಭ್ಯರ್ಥಿಗಳಿಗೆ 850 ರೂಪಾಯಿ ಅರ್ಜಿ ಶುಲ್ಕ ನಿಗದಿಯಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ https://ibpsonline.ibps.in/crpcl13jun23/ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಪ್ರಿಲಿಮಿನರಿ ಪರೀಕ್ಷೆ & ಮುಖ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. IBPS ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಪತ್ರ ಲಭ್ಯವಿದ್ದು, ಪರೀಕ್ಷೆ ನಂತರ ನೇರ ಸಂದರ್ಶನ ನಡೆಸಲಾಗುತ್ತದೆ.












Click it and Unblock the Notifications