IBPS Recruitment: ಬ್ಯಾಂಕಿಂಗ್ ಕ್ಷೇತ್ರದಲ್ಲಿ 6128 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದ ಎಷ್ಟಿವೆ?
ಬೆಂಗಳೂರು, ಜುಲೈ 19: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ IBPS ತನ್ನಲ್ಲಿ ಖಾಲಿ ಇರುವ 6128 ಕ್ಲರ್ಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಿತ್ತು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ಅರ್ಹ ಪದವೀಧರರು ಈ ಕೂಡಲೇ ಅರ್ಜಿ ಸ್ಲಲಿಸಬೇಕು.
IBPS ಈ ಹುದ್ದೆಗಳ ನೇಮಕಾತಿಗೆ ಪರೀಕ್ಷೆಯನ್ನು ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ ನಡೆಸುತ್ತಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಡಿದ್ದು ಜುಲೈ 21 ಅರ್ಜಿ ಕೊನೆ ದಿನವಾಗಿದೆ. ಕರ್ನಾಟಕದಲ್ಲಿ ಖಾಲಿ ಇರುವ 457 ಹುದ್ದೆಗಳಿಗೂ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಇಲ್ಲಿನ ಮಾಹಿತಿ ತಿಳಿದು, ಸಾಧ್ಯವಾದಲ್ಲಿ ಅಧಿಸೂಚನೆ ಓದಿಕೊಂಡು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಐಬಿಪಿಎಸ್
ಹುದ್ದೆ ಹೆಸರು: ಕ್ಲರ್ಕ್
ಉದ್ಯೋಗ ಎಲ್ಲಿ: ದೇಶದಾದ್ಯಂತ ವಿವಿಧ ಬ್ಯಾಂಕ್‌ಗಳು
ಒಟ್ಟು ಹುದ್ದೆ : 6128
ಕರ್ನಾಟಕದ ಕ್ಲರ್ಕ್ ಸಂಖ್ಯೆ: 457
ವಯಸ್ಸಿನ ಅರ್ಹತೆ: ಕನಿಷ್ಠ 20 ಮತ್ತು ಗರಿಷ್ಠ 28 ವರ್ಷ.
ವಿದ್ಯಾರ್ಹತೆ: ವಯೋಮಿತಿ
ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಇಲ್ಲಿ ಅನುಭವ ಇಲ್ಲದವರಿಗೂ ಕೆಲಸ ಪಡೆಯುವ ಅವಕಾಶ ಇದೆ. ಅಭ್ಯರ್ಥಿಗಳಿಗೆ ಕನಿಷ್ಠ 20 ಮತ್ತು ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ಜಾತಿ ಆಧಾರದಲ್ಲಿ ಅಭ್ಯರ್ಥಿಗಳಿಗೆ -3 ವರ್ಷ, ಹಾಗೂ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಸಿಗಲಿವೆ.
ಯಾವೆಲ್ಲ ಬ್ಯಾಂಕ್‌ಗಳಲ್ಲಿ ಹುದ್ದೆ ಖಾಲಿ ಇವೆ?
ಅರ್ಜಿ ಸಲ್ಲಿಸುವವರು ಇಲ್ಲಿ ನೀಡಲಾಗಿರುವ ' ಬ್ಯಾಂಕ್ ಆಫ್ ಬರೋಡಾ, ಕೆನಾರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬಂಡೀಸ್ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಯುಸಿಯೋ ಬ್ಯಾಂಕ್, ಪಂಜಾಬ್ ಅಂಡ್ ಸಿಂದ್ ಬ್ಯಾಂಕ್‌ಗಳಲ್ಲಿ ಕ್ಲರ್ಕ್ ಪೋಸ್ಟ್ ಖಾಲಿ ಇವೆ.

ಅರ್ಜಿ ಸಲ್ಲಿಕೆ ವಿಧಾನ
* ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಹಾಕಬೇಕು. ಅದಕ್ಕಾಗಿ ಐಬಿಪಿಎಸ್ ಸಂಸ್ಥೆ ಅಧಿಕೃತ ಪೋರ್ಟಲ್ ಲಿಂಕ್ ibps.gov.in ಗೆ ಭೇಟಿ ನೀಡಬೇಕು.
* ನಂತರ ಕ್ಲರ್ಕ್ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.
* ಬಳಿಕ ಅಲ್ಲಿ 'CRP-Clerks-XIV ಅಡಿಯಲ್ಲಿ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಎಂಬುದನ್ನು ಆಯ್ಕೆ ಮಾಡಿ.
* ನಂತರ ತೆರೆದ ವೆಬ್‌ಪುಟದಲ್ಲಿ 'ಹೊಸ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ' ಎಂಬುದನ್ನು ಆಯ್ಕೆ ಮಾಡಿಕೊಳ್ಳಿ.
* ಅಲ್ಲಿ ಕೇಳಲಾಗುವು ನಿಮ್ಮ ವೈಯಕ್ತಿಕ ವಿವರಗಳನ್ನು ಸಮೂದಿಸಿ, ನೋಂದಣಿ ಮಾಡಿಕೊಳ್ಳಿ.
* ನಂತರ ಲಾಗಿನ್ ಆಗುವ ಮೂಲಕ ಶೈಕ್ಷಣಿಕ, ಇತರ ಮಾಹಿತಿಗಳನ್ನು ನೀಡಿ ಅಪ್ಲಿಕೇಶನ್ ಸಲ್ಲಿಸಬೇಕು.
ಅರ್ಜಿ ಶುಲ್ಕದ ಮಾಹಿತಿ- ವೇತನ
ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಶುಲ್ಕ ರೂ.850. ನಿಗದಿ ಗೊಳಿಸಲಾಗಿದೆ. ಇದನ್ನು ನೀವು ಆನ್‌ಲೈನ್ ಮೂಲಕವೇ ಪಾವತಿಸಬೇಕು. ಆಯ್ಕೆ ಆಗುವವರಿಗೆ ಮಾಸಿಕವಾಗಿ 20000 ರೂ.ನಿಂದ 39993 ರೂ.ವರೆಗೆ ವೇತನ ನೀಡಲಾಗುವುದು ಎಂದು ಐಬಿಪಿಎಸ್ ತಿಳಿಸಿದೆ. ಹೆಚ್ಚಿನ ಮಾಹಿತಿಗೆ https://www.ibps.in/ ಸಂಪರ್ಕಿಸಬಹುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications