ಐಡಿಬಿಐ ಬ್ಯಾಂಕ್‌ನಲ್ಲಿ 61 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 03 : ಐಡಿಬಿಐ ಬ್ಯಾಂಕ್ 61 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 12/12/2019 ಕೊನೆಯ ದಿನವಾಗಿದೆ.
ಐಡಿಬಿಐ ಬ್ಯಾಂಕ್ 61 Specialist Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಅಥವ ಸಿಎ ವ್ಯಾಸಂಗ ಮಾಡಿರಬೇಕು. ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ ವಿವರ: ಡಿಜಿಎಂ ಹುದ್ದೆಗೆ 35 ರಿಂದ 45 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಎಜಿಎಂ ಹುದ್ದೆಗೆ 28 ರಿಂದ 40 ವರ್ಷಗಳು. ಮ್ಯಾನೇಜರ್ ಹುದ್ದೆಗೆ 25 ರಿಂದ 35 ವರ್ಷಗಳು.
ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 150 ರೂ., ಇತರ ಅಭ್ಯರ್ಥಿಗಳು 700 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಪ್ರಮುಖ ಮಾಹಿತಿಗಳು
* ಐಡಿಬಿಐ ಬ್ಯಾಂಕ್‌ನಲ್ಲಿ ಕೆಲಸ
* Specialist Officer ಹುದ್ದೆ
* ದೇಶದ ಯಾವುದೇ ನಗರದಲ್ಲಿ ಕೆಲಸ
* 12/12/2019 ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications