Bank Recruitment: ಐಡಿಬಿಐನಲ್ಲಿ ಭರ್ಜರಿ 1000 ಹುದ್ದೆಗಳ ನೇಮಕಾತಿ, ಮಾಸಿಕ ವೇತನ ವಿವರ

ಬೆಂಗಳೂರು, ನವೆಂಬರ್ 10: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ತನ್ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 16 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮುಂದಿನ ವಿವರಗಳು ತಿಳಿಯಿರಿ.

IDBI ಬ್ಯಾಂಕ್ ತನ್ನಲ್ಲಿ ಖಾಲಿ ಇರುವ ಒಟ್ಟು 1000 ಎಕ್ಸಿಕ್ಯೂಟಿವ್ (ಸೇಲ್ಸ್ ಮತ್ತು ಆಪರೇಷನ್ಸ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ವೇತನ, ಪೋಸ್ಟಿಂಗ್ ಸೇರಿದಂತೆ ಇನ್ನಿತರ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿದೆ.

IDBI Bank Recruitment Apply to 1000 Excutive Posts Salary details

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: IDBI ಬ್ಯಾಂಕ್

ಹುದ್ದೆ ಹೆಸರು: ಎಕ್ಸಿಕ್ಯೂಟಿವ್

ಒಟ್ಟು ಹುದ್ದೆಗಳೂ: 1000

ಪೋಸ್ಟಿಂಗ್ ಎಲ್ಲಿ?: ಭಾರತದಲ್ಲಿ ಎಲ್ಲಿ ಬೇಕಾದರೂ

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ನವೆಂಬರ್ 16

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಮಾಸಿಕ ವೇತನ: ನಿಯಮಾನುಸಾರ

ಶೈಕ್ಷಣಿಕ ಅರ್ಹತೆ ವಿವರ

ಈ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಮಂಡಳಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು ಎಂದು ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.

IDBI Bank Recruitment Apply to 1000 Excutive Posts Salary details

ವಯಸ್ಸಿನ ಮಿತಿ ಎಷ್ಟು?

ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳ ವಯಸ್ಸು ಕಳೆದ ತಿಂಗಳು ಅಕ್ಟೋಬರ್ 1ಕ್ಕೆ ಸರಿಯಾಗಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ದಾಟಿರಬಾರದು. ಇನ್ನೂ ಜಾತಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ ಎಂದು ಬ್ಯಾಂಕ್ ತಿಳಿಸಿದೆ.

ಆಯ್ಕೆ ಪ್ರಕ್ರಿಯೆ ಹೇಗೆ

ಅಭ್ಯರ್ಥಿಗಳನ್ನು ಬ್ಯಾಂಕಿ ಸಂಬಂಧ ಮುಖ್ಯಸ್ಥರು, ಅಧಿಕಾರಿಗಳು ನೇರ ಸಂದರ್ಶನದ ನಡೆಸಿ ಆಯ್ಕೆ ಮಾಡಿಕೊಳ್ಳುತ್ತಾರೆ. ಇದಕ್ಕೂ ಮೊದಲು ಆನ್‌ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಸಲಾಗುತ್ತದೆ. ಬಳಿಕ ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಆಯ್ಕೆ ಆಗುವವರಿಗೆ ಮಾಸಿಕ 29,000 ರಿಂದ 31,000 ರೂಪಾಯಿ ವೇತನ ಸಹಿತ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡುತ್ತದೆ.

ಅರ್ಜಿ ಶುಲ್ಕದ ಮಾಹಿತಿ

ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, PwBD ಅಭ್ಯರ್ಥಿಗಳಿಗೆ 250 ರೂಪಾಯಿ ಹಾಗೂ ಇತರ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 1050 ರೂಪಾಯಿ ವೇತನ ನೀಡಲಾಗುತ್ತದೆ. ಈ ಶುಲ್ಕವನ್ನು ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್‌ನಲ್ಲೇ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

ಅರ್ಜಿ ಸಲ್ಲಿಸುವವರು ಇಲ್ಲಿರುವ ಅಧಿಕೃತ ವೆಬ್‌ಸೈಟ್ https://www.idbibank.in/idbi-bank-careers-current-openings.aspx ಗೆ ಭೇಟಿ ನೀಡಬೇಕು.

ಪ್ರಮುಖ ದಿನಗಳನ್ನು ತಿಳಿಯಿರಿ

ಅರ್ಜಿ ಸಲ್ಲಿಕೆ ಆರಂಭ ದಿನ: 07 ನವೆಂಬರ್ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16 ನವೆಂಬರ್ 2024

ಆನ್‌ಲೈನ್ ಟೆಸ್ಟ್ ದಿನಾಂಕ: 2024 ಡಿಸೆಂಬರ್ 1

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+