IIMB Recruitment 2023: ಬಿಎ, ಎಂಬಿಎ ಪದವೀಧರರಿಗೆ ಬೆಂಗಳೂರಿನಲ್ಲಿ ಉದ್ಯೋಗ ಖಾಲಿ ಇದೆ
ಬೆಂಗಳೂರು, ನವೆಂಬರ್ 08: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಸಂಸ್ಥೆಯು ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಅರ್ಹರನ್ನು ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಸಂಸ್ಥೆಯಲ್ಲಿ ಒಟ್ಟು 3 ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳು ಖಾಲಿ ಇವೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಡಿಸೆಂಬರ್ 15ರೊಳಗೆ ಅರ್ಜಿ ಹಾಕಬೇಕು ಎಂದು ಸಂಸ್ಥೆ ಸೂಚಿಸಿದೆ. ಅರ್ಜಿ ಸಲ್ಲಿಕೆಗೂ ಮೊದಲು ಹುದ್ದೆ, ನೇಮಕಾತಿ, ಆಯ್ಕೆ, ವೇತನ ಕುರಿತು ಇಲ್ಲಿ ತಿಳಿಯಿರಿ.

ನೇಮಕಾತಿ ಹೇಗೆ ನಡೆಯಲಿದೆ, ದಿನಾಂಕಗಳು
ಸಂಸ್ಥೆ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB)
ಹುದ್ದೆ ಹೆಸರು: ಅಕಾಡೆಮಿಕ್ ಅಸೋಸಿಯೇಟ್
ಖಾಲಿ ಹುದ್ದೆ: 03
ಮಾಸಿಕ ವೇತನ: 30,000 ನಿಂದ 36,000 ರೂಪಾಯಿ
ಪೋಸ್ಟಿಂಗ್ ಎಲ್ಲಿ: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಡಿಸೆಂಬರ್ 15
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಿರಬೇಕು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು ಎಂದಷ್ಟೇ ತಿಳಿಸಲಾಗಿದ್ದು, ಪೂರ್ಣ ಮಾಹಿತಿಗೆ ನೀವು ಅಧಿಸೂಚನೆ ನೊಡಬೇಲು. ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಎಂದು ಸಂಸ್ಥೆ ಹೇಳಿದೆ.
ಅರ್ಜಿ ಸಲ್ಲಿಸುವ ಯಾವ ಸಮುದಾಯದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿ ಮಾಡಲಾಗಿಲ್ಲ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಂತರ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಬಳಿಕ ಅವರಿಗೆ ಬೆಂಗಳೂರಿನಲ್ಲಿಯೇ ಸಂಸ್ಥೆ ಪೋಸ್ಟಿಂಗ್ ನೀಡಲಿದೆ. ಮೇಲಿನ ಎಲ್ಲ ಮಾಹಿತಿಗಳನ್ನು ಆಧರಿಸಿ ಅಭ್ಯರ್ಥಿಗಳು ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ಗೆ (https://www.iimb.ac.in/home) ಭೇಟಿ ನೀಡಬಹುದು.











Click it and Unblock the Notifications