IIMB Recruitment: ಬೆಂಗಳೂರಲ್ಲಿ ಉದ್ಯೋಗ ಖಾಲಿ ಇದೆ: ಈಗಲೇ ಅರ್ಜಿ ಹಾಕಿ

ಬೆಂಗಳೂರು, ಮೇ 07: ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ (IIMB) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರಿನಲ್ಲಿ (IIMB) ಒಟ್ಟು 3 ಕೇಸ್ ರೈಟರ್​ ಹುದ್ದೆಗಳು ಖಾಲಿ ಇವೆ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಸಲ್ಲಿಸಬೇಕು. 2024 ಮೇ 20 ಅರ್ಜಿ ಸಲ್ಲಿಕೆ ಕೊನೆಯ ದಿನವಾಗಿದ್ದು, ಅರ್ಹರು ಆನ್​ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

IIMB Recruitment 2024 Apply 3 Case Writer Post

ನೇಮಕಾತಿ ಪೂರ್ಣ ವಿವರ

ಸಂಸ್ಥೆ ಹೆಸರು: ಐಐಎಂಬಿ

ಹುದ್ದೆ ಹೆಸರು: ಕೇಸ್ ರೈಟರ್​ ಹುದ್ದೆ

ಒಟ್ಟು ಹುದ್ದೆ: ಮೂರು

ಪೋಸ್ಟಿಂಗ್: ಬೆಂಗಳೂರು

ಅರ್ಜಿ ಸಲ್ಲಿಕೆ ಕೊನೆ ದಿನ: 2024 ಮೇ 20.

ಮಾಸಿಕ ವೇತನ: ಮಾಸಿಕ 40,000 ರೂಪಾಯಿ.

ಶೈಕ್ಷಣಿಕ ಅರ್ಹತೆ

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಪತ್ರಿಕೋದ್ಯಮ/ ಕಮ್ಯುನಿಕೇಶನ್/ ಇಂಗ್ಲಿಷ್​/ಬ್ಯುಸಿನೆಸ್/ಮ್ಯಾನೇಜ್​ಮೆಂಟ್ ಸ್ಟಡೀಸ್​​ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಅಧಿಸೂಚನೆ ತಿಳಿಸಿದೆ.

IIMB Recruitment 2024 Apply 3 Case Writer Post

ವಯಸ್ಸಿನ ಮಿತಿ

ಐಐಎಂಬಿ ನೇಮಕಾತಿ ಅಧಿಸೂಚನೆ ಅನ್ವಯ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ. ಕೇಸ್​ ರೈಟಿಂಗ್​​ನಲ್ಲಿ ಕನಿಷ್ಠ 2 ವರ್ಷ ಅನುಭವ ಇರುವವರು ಕೂಡಲೇ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅಲ್ಲಿ ಆಯ್ಕೆ ಆಗುವವರಿಗೆ ನಂತರ ಸಂದರ್ಶನ ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ ಎಂದು ಐಐಎಂಬಿ ತಿಳಿಸಿದೆ.

ಅರ್ಜಿ ಹಾಕೋದು ಹೇಗೆ?

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಇಲ್ಲಿ ನೀಡಲಾಗಿರುವ https://www.iimb.ac.in/job-opportunities ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಲಿಂಕ್‌ ನಲ್ಲಿ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಂಡು ಓದಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+