IIMB Jobs: ಬೆಂಗಳೂರಲ್ಲಿ ₹12ಲಕ್ಷ ವೇತನದ ಉದ್ಯೋಗ ಖಾಲಿ ಇದೆ
ಬೆಂಗಳೂರು, ಜೂನ್ 20: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆ ಆಗುವವರಿಗೆ ಆಕರ್ಷಕ ಪ್ಯಾಕೇಜ್ ಸಹ ಘೋಷಿಸಿದೆ.
ಐಐಎಂಬಿಯಲ್ಲಿ ಒಂದು ಕನ್ಸಲ್ಟೆಂಟ್ ಹುದ್ದೆ ಖಾಲಿ ಇದೆ. ಬೆಂಗಳೂರಿನಲ್ಲಿ ಅಧಿಕ ವೇತನದ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಭರ್ಜರಿ ವೇತನ ಸಿಗಲಿದೆ. ಅರ್ಜಿ ಸಲ್ಲಿಕೆಗೆ ಜುಲೈ 3 ಕೊನೆಯ ದಿನವಾದರೂ ಅಲ್ಲಿಯವರೆಗೆ ಕಾಯದೇ ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಹಾಕುವಂತೆ ಮನವಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆಗು ಮೊದಲು ಅಭ್ಯರ್ಥಿಗಳು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ಐಐಎಂಡಿ
ಹುದ್ದೆ ಹೆಸರು: ಕನ್ಸಲ್ಟೆಂಟ್ ಹುದ್ದೆ
ಒಟ್ಟು ಹುದ್ದೆ: ಒಂದು
ಅರ್ಜಿ ಸಲ್ಲಿಕೆ ಕೊನೆ ದಿನ: ಜುಲೈ 03
ಮಾಸಿಕ ವೇತನ: 10- 12 ಲಕ್ಷ ರೂಪಾಯಿ
ಶೈಕ್ಷಣಿಕ ಅರ್ಹತೆ
ಬೆಂಗಳೂರಿನಲ್ಲಿ ಖಾಲಿ ಇರುವ ಈ ಐಐಎಂಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಮಾಹಿತಿ ನೀಡಿದೆ.

ವಯಸ್ಸಿನ ಮಿತಿ
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಅಧಿಸೂಚನೆ ತಿಳಿಸುವಂತೆ, ಅರ್ಜಿ ಸಲ್ಲಿಸುವವರ ವಯಸ್ಸು ನಿಯಮಾನುಸಾರ ಇರಬೇಕು. ಜಾತಿ ಮೀಸಲಾತಿ ಅನುಗುಣವಾಗಿ ಆಯಾ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಮಾಸಿಕ, ಪೋಸ್ಟಿಂಗ್ ಎಲ್ಲಿ?
ಅರ್ಜಿ ಸಲ್ಲಿಸಿ ನಂತರ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 10ರಿಂದ 12 ಲಕ್ಷ ರೂಪಾಯಿ ವೇತನ ಸಹಿತ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು ಎಂದು ಐಐಎಂಬಿ ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿ ಅಭ್ಯರ್ಥಿಗಳಿಗೆ ಮೊದಲು ಐಐಎಂಬಿ ಲಿಖಿತ ಪರೀಕ್ಷೆ ನಡೆಸಲಿದೆ. ಅಲ್ಲಿ ಆಯ್ಕೆ ಆಗುವವರಿಗೆ ನಂತರ ನೇರ ಸಂದರ್ಶನ ನಡೆಸಲಾಗುವುದು. ಯಾವ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ನಿಗದಿ ಮಾಡಿಲ್ಲ. ಉಚಿತವಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಹಾಕಬಹುದು ಎಂದು ಐಐಎಂಬಿ ಅಧಿಸೂಚನೆ ತಿಳಿಸಿದೆ.
ಅಭ್ಯರ್ಥಿಗಳು ಆನ್‌ಲೈನ್ (https://www.iimb.ac.in/job-opportunities) ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.












Click it and Unblock the Notifications