IIMB Recruitment 2024: ಬೆಂಗಳೂರಲ್ಲಿ ಭರ್ಜರಿ ಉದ್ಯೋಗ, ಅರ್ಜಿ ಸಲ್ಲಿಸಲು ಮಾಹಿತಿ ತಿಳಿಯಿರಿ
ಬೆಂಗಳೂರು, ಏಪ್ರಿಲ್ 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಭರ್ಜರಿ ಉದ್ಯೋಗವಕಾಶ ಕಲ್ಪಿಸಿದೆ. ತನ್ನಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಹೌದು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ತನ್ನಲ್ಲಿನ ಅನೇಕ ಅಕಾಡೆಮಿಕ್ ಅಸೋಸಿಯೇಟ್- ಸ್ಟ್ರಾಟಜಿ ಏರಿಯಾ ಹುದ್ದೆಗಳಿಗೆ ಅರ್ಹರನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬೇಕು.

ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ರಾಜಧಾನಿ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. 2024ರ ಮೇ 4 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗೆ ಈ ಕಳೆಗಿನ ಮಾಹಿತಿಗಳನ್ನು ಗಮನಿಸಬೇಕು.
ನೇಮಕಾತಿ ಪ್ರಕ್ರಿಯೆ ವಿವರ
ನೇಮಕಾತಿ ಸಂಸ್ಥೆ ಹೆಸರು: ಐಐಎಂಬಿ
ಹುದ್ದೆ ಹೆಸರು: ಅಕಾಡೆಮಿಕ್ ಅಸೋಸಿಯೇಟ್- ಸ್ಟ್ರಾಟಜಿ ಏರಿಯಾ
ಮಾಸಿಕ ವೇತನ: ರೂ. 38,000 ನಿಂದ 44,000 ರೂಪಾಯಿ
ಪೋಸ್ಟಿಂಗ್ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಮೇ 4
ವಿದ್ಯಾರ್ಹತೆ
ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ ಮ್ಯಾನೇಜ್ಮೆಂಟ್/ ಸೋಷಿಯಲ್ ಸೈನ್ಸಸ್ / ಸ್ಟಾಟಿಸ್ಟಿಕ್ಸ್/ ಎಕನಾಮಿಕ್ಸ್/ ಕಾಮರ್ಸ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಅಧಿಸೂಚನೆಯಲ್ಲಿ ತಿಳಿಸಿದೆ.

ವಯೋಮಿತಿ ವಿವರ
ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುವುದು. ನಂತರ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸಲಾಗುವುದು. ಇಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುವುದು. ಮಾಸಿಕವಾಗಿ 38,000- 44,000 ರೂಪಾಯಿ ನೀಡಲಾಗುವುದು ಎಂದು ಐಐಎಂಇ ಮಾಹಿತಿ ನೀಡಿದೆ.
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗಿಲ್ಲ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು
ಆನ್‌ಲೈನ್ ಇಲ್ಲಿನ https://www.iimb.ac.in/job-opportunities ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇದೇ ಲಿಂಕ್‌ಗೆ ಭೇಟಿ ನೀಡಬಹುದು.
ಮುಖ್ಯ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನ: 2024 ಏಪ್ರಿಲ್ 20
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಮೇ 4












Click it and Unblock the Notifications