IIT Dharwad Recruitment 2023: ಧಾರವಾಡದಲ್ಲಿ ಉದ್ಯೋಗ ಖಾಲಿ ಇದೆ, ವೇತನ ವಿವರ
ಬೆಂಗಳೂರು, ಅಕ್ಟೋಬರ್ 23: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT Dharwad) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಉತ್ತರ ಕರ್ನಾಟಕದ ಧಾರವಾಡದಲ್ಲಿ ಉದ್ಯೋಗ ಹುಡುಕುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಧಾರವಾಡದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿ ಒಂದು ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅಕ್ಟೋಬರ್ 31 ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆ ಆದವರಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಅರ್ಜಿ ಸಲ್ಲಿಕೆಗೂ ಮುನ್ನ ನೇಮಕಾತಿ, ವೇತನ, ಇನ್ನಿತರ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಐಐಟಿ ಧಾರವಾಡ
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಖಾಲಿ ಹುದ್ದೆ ಸಂಖ್ಯೆ: 1
ಮಾಸಿಕ ವೇತನ: 31,000 ರೂಪಾಯಿ
ಪೋಸ್ಟಿಂಗ್ ಧಾರವಾಡ: ಧಾರವಾಡ
ಅರ್ಜಿ ಸಲ್ಲಿಕೆ ಕೊನೆ ದಿನ: ಅಕ್ಟೋಬರ್ 31
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್ ಎಂಜಿನಿಯರಿಂಗ್, ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್, ಎಂ.ಟೆಕ್ ಮುಗಿಸಿರಬೇಕು ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ತಿಳಿಸಿದೆ.
ವಯಸ್ಸಿನ ಮಾಹಿತಿ
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ ಎಂದು ಐಐಟಿ ಧಾರವಾಡ ಹೇಳಿದೆ.

ಅರ್ಜಿ ಶುಲ್ಕ: ಆಯ್ಕೆ ಹೇಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಅರ್ಜಿಯನ್ನು ಉಚಿತವಾಗಿ ಆನ್‌ಲೈನ್ ಮೂಲಕ ಭರ್ತಿ ಮಾಡಬೇಕು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆ ಆದವರಿಗೆ ಮಾಸಿಕ 31 ಸಾವಿರ ರೂಪಾಯಿ ಸಮೇತ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುವುದು.
ನೆನಪಿಡಬೇಕಾದ ದಿನಾಂಕ
ಅರ್ಜಿ ಸಲ್ಲಿಕೆ ಆರಂಭವಾಗಿದ್ದು: 2023 ಅಕ್ಟೋಬರ್ 18
ಅರ್ಜಿ ಸಲ್ಲಿಕೆಯ ಕೊನೆಯ ದಿನ: 2023 ಅಕ್ಟೋಬರ್ 31












Click it and Unblock the Notifications