IIT Dharwad Recruitment 2024: ₹35,000 ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ-ಮಾಹಿತಿ, ವಿವರ
ಧಾರವಾಡ, ಮಾರ್ಚ್, 22: IIT ಧಾರವಾಡ (Indian Institute of Technology Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಎಷ್ಟು ಹುದ್ದೆಗಳು ಖಾಲಿಯಿವೆ ಹಾಗೂ ಆಯ್ಕೆಯಾದವರಿಗೆ ಮಾಸಿಕ ಸಂಬಳ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಐಐಟಿ ಧಾರವಾಡದಲ್ಲು ಒಟ್ಟು 1 ಯಂಗ್ ಪ್ರೊಫೆಶನಲ್- II (IT) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 23, 2024ರಂದು ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಸರ್ಜಿ ಸಲ್ಲಿಜೆ ಮಾಡಬೇಕು. ಆಯ್ಕೆಯಾದವರಿಗೆ ಧಾರವಾಡದಲ್ಲಿ ಹುದ್ದೆ ನೀಡಲಾಗುತ್ತದೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಸಂಸ್ಥೆಯಲ್ಲಿ ಯಂಗ್ ಪ್ರೊಫೆಶನಲ್- II (IT) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಜಿ ಸಲ್ಲಿಸಲು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದವರು ಅರ್ಹತೆ ಹೊಂದಿರುತ್ತಾರೆ. ಇನ್ನು ಆಯ್ಕೆಯಾದವರಿಗೆ ಮಾಸಿಕ ವೇತನ ₹35,000 ನೀಡಲಾಗುತ್ತದೆ.
ಧಾರವಾಡ ಉದ್ಯೋಗ ಸ್ಥಳವಾಗಿದೆ.
ಶೈಕ್ಷಣಿಕ ಅರ್ಹತೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್/ಇನ್ಫರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್/ಆರ್ಟಿಫಿಸಿಯಲ್ ಇಂಟೆಲಿಜೆನ್ಸ್/ಆಪರೇಟಿಂಗ್ ಸಿಸ್ಟಮ್ಸ್/ಸಾಫ್ಟ್ವೇರ್ ಇಂಜಿನಿಯರಿಂಗ್/ಕಂಪ್ಯೂಟರ್ ಗ್ರಾಫಿಕ್ಸ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕಾಗುತ್ತದೆ
ಅರ್ಜಿ ಸಲ್ಲಿರುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 36 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಆಸಕ್ತ ಅಭ್ಯರ್ಥಿಗಳು ವೆಬ್-ಸೈಟ್, ಪೋರ್ಟಲ್ ಡೆವಲಪ್ಮೆಂಟ್ ಮತ್ತು ನಿರ್ವಹಣೆ, MySQLನಲ್ಲಿ ಅನುಭವಿಯಾಗಿರಬೇಕು. ಅಭ್ಯರ್ಥಿಗಳು Java/C++/PHP/Python ಆಧಾರಿತ ಅಪ್ಲಿಕೇಶನ್ ಡೆವಲಪ್ಮೆಂಟ್ನಲ್ಲಿ ಅನುಭವ ಹೊಂದಿರಬೇಕಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಅಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಇನ್ನು ಅರ್ಜಿ ಸಲ್ಲಿಸಿದವರಿಗೆ ಆನ್‌ಲೈನ್ ಟೆಸ್ಟ್ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕೆಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.












Click it and Unblock the Notifications