IIT Dharwad Jobs: ಪ್ರಮುಖ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ
ಧಾರವಾಡ, ಜುಲೈ 24: ವಿದ್ಯಾಕಾಶಿ ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಒಟ್ಟು ಎರಡು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು ಖಾಲಿ ಇವೆ. ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ (ಆನ್‌ಲೈನ್) ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಮೊದಲು ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ ಸೇರಿದಂತೆ ನೇಮಕಾತಿ ಪೂರ್ಣ ಮಾಹಿತಿ ತಿಳಿಸಿ. ಅರ್ಜಿ ಸಲ್ಲಿಕೆಗೆ ನಾಳೆ ಜುಲೈ 25 ಗುರುವಾರ ಕೊನೆ ದಿನವಾಗಿದೆ.
ನೇಮಕಾತಿ ಪೂರ್ಣ ವಿವರ
ಸಂಸ್ಥೆ ಹೆಸರು: ಐಐಟಿ ಧಾರವಾಡ
ಉದ್ಯೋಗ ಹೆಸರು: ಪ್ರಾಜೆಕ್ಟ್ ಇಂಜಿನಿಯರ್
ಒಟ್ಟು ಹುದ್ದೆ: ಎರಡು
ಪೋಸ್ಟಿಂಗ್: ಧಾರವಾಡ
ವಿದ್ಯಾರ್ಹತೆ: ಪದವಿ
ಅರ್ಜಿ ಸಲ್ಲಿಕೆ ಕೊನೆ: ಜುಲೈ 25
ಶೈಕ್ಷಣಿಕ ವಿವರ
ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT Dharwad) ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿಯನ್ನು ಪಡೆದಿರುವುದು ಕಡ್ಡಾಯ ಎಂದು ತಿಳಿಸಲಾಗಿದೆ.

ವಯಸ್ಸಿನ ಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಇದೇ 2024ರ ಜುಲೈ 31ಕ್ಕೆ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯಸ್ಸಿನ ಮೀತಿ ನಿಗದಿ ಮಾಡಲಾಗಿದೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,000 ರೂಪಾಯಿ ವೇತನ ನೀಡಲಾಗುತ್ತದೆ ಎಂದು ಐಐಟಿ ಸಂಸ್ಥೆ ತಿಳಿಸಿದೆ.
ಉದ್ಯೋಗದ ಸ್ಥಳ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಆಯ್ಕೆ ಆದವರಿಗೆ ಧಾರವಾಡದಲ್ಲಿಯೇ ಪೋಸ್ಟಿಂಗ್ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ ಎಂದು ಹೇಳಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆನ್‌ಲೈನ್ ಮೂಲಕವೇ ನಾಳೆ ಗುರುವಾರ ಸಂಜೆಯೊಳಗೆ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ನೀವು ಅಧಿಕೃತ ವೆಬ್‌ಸೈಟ್‌ಗೆ https://www.iitdh.ac.in/other-recruitments ಭೇಟಿ ನೀಡಬೇಕು.
ನೆನಪಿಡಬೇಕಾದ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನ: ಜೂನ್ 19
ಅರ್ಜಿ ಸಲ್ಲಿಕೆ ಕೊನೆ ದಿನ: ಜುಲೈ 25
ಶಾರ್ಟ್‌ಲಿಸ್ಟ್ ಪ್ರಕಟ ದಿನಾಂಕ ಜುಲೈ 29
ಸಂದರ್ಶನ ದಿನ: ಜುಲೈ 31
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೂ ಕಾಯದೇ ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಬೇಕು. ಸಾಧ್ಯವಾದರೆ, ವೆಬ್‌ಸೈಟ್ ಲಿಂಕ್ ನಲ್ಲಿ ಅಧಿಸೂಚನೆ ಡೌನ್‌ಲೋಡ್ ಮಾಡಿಕೊಂಡು ಓದಿ ಅರ್ಜಿ ಸಲ್ಲಿಸಬೇಕು.












Click it and Unblock the Notifications