KPSC: ಕೆಪಿಎಸ್‌ಸಿಯಿಂದ ಮಹತ್ವದ ಅಪ್ಡೇಟ್ ಮಾಹಿತಿ

KPSC: ಕೆಪಿಎಸ್‌ಸಿಯಿಂದ ಆಗಾಗ ಉದ್ಯೋಗಾವಕಾಶಗಳನ್ನು ಒದಗಿಸುತ್ತಲೇ ಇರುತ್ತದೆ. ಅಲ್ಲದೆ ಪರೀಕ್ಷೆಗಳ ನಿಯಮಗಳಲ್ಲಿ ಕೂಡ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ ಮತ್ತೊಂದು ಮಹತ್ವದ ಅಪ್ಡೇಟ್‌ ಮಾಹಿತಿಯೊಂದನ್ನು ನೀಡಿದೆ. ಹಾಗಾದರೆ ಅದೇನೆಂದು ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಭ್ಯರ್ಥಿಗಳು ಇದನ್ನು ಗಮನಿಸಲೇಬೇಕಿದೆ.

ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಇನ್ಮುಂದೆ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚನೆ ನೀಡಿದೆ.

Important Update Information from KPSC Know details

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೆ ಈಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆಬ್ರವರಿ 16ರಿಂದ ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಳಲಾಗಿದೆ ಎಂದು ತಿಳಿದುಬಂದಿದೆ.

₹69,100 ಹುದ್ದೆಗೆ ಅರ್ಜಿ ಆಹ್ವಾನ: ಹಲವು ಪ್ರತಿಷ್ಠಿತ ಕಂಪನಿಗಳು ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಲಿವೆ. ಹಾಗೆಯೇ ಇದೀಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಖಾಲಿ ಇರುವ 1124 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಗಮನಿಸಬೇಕಾದ ಅಂಶಗಳು ಹಾಗೂ ಮಾಸಿಕ ವೇತನ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ಆಗಿದ್ದು, 30 ದಿನಗಳವರೆಗೆ ಅವಕಾಶ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

2025ರ CISF ಕಾನ್ಸ್‌ಟೇಬಲ್ ಹುದ್ದೆಗಳ ಅಧಿಸೂಚನೆಯನ್ನ 21 ಜನವರಿಯಂದೇ ಪ್ರಕಟಿಸಲಾಗಿದ್ದು, ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿ ಇದರಲ್ಲಿ ಕೊಡಲಾಗಿದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ, ಪರೀಕ್ಷೆಯ ನಮೂನೆ ಇತ್ಯಾದಿ ವಿವರ ಇಲ್ಲಿ ನೀಡಲಾಗಿದೆ. ಹುದ್ದೆಗಳನ್ನು ವರ್ಗಿಕರಿಸಲಾಗಿದ್ದು, ಜನರಲ್-460, ಎಸ್ಸಿ-167, ಎಸ್ಟಿ-83, ಒಬಿಸಿ-303, ಇಡಬ್ಲುಎಸ್-111 ಹುದ್ದೆಗಳು ಖಾಲಿಯಿವೆ.

ಸಿಐಎಸ್ಎಫ್ ಕಾನ್ಸ್‌ಟೇಬಲ್ ಸೇರಿ ವಿವಿಧ ಉದ್ಯೋಗಗಳನ್ನು ಭರ್ತಿ ಮಾಡುತ್ತಿದೆ. ವರ್ಗ-3ರಲ್ಲಿ ಈ ಕೆಲಸಗಳು ಬರುತ್ತವೆ. ಈ ಉದ್ಯೋಗಗಳಿಗೆ ಲಿಖಿತ ಪರೀಕ್ಷೆ ಸಹ ಇರುತ್ತದೆ. ಇದರಲ್ಲಿ 100 ಪ್ರಶ್ನೆಗಳಿಗೆ 100 ಅಂಕಗಳನ್ನು ನಿಗದಿಪಡಿಸಲಾಗಿದೆ. 120 ನಿಮಿಷಗಳಲ್ಲಿ ಎಲ್ಲಾ ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕಾಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+