ಕರ್ನಾಟಕಕ್ಕೆ 5 ವರ್ಷ ಬಂದ ಬಂಡವಾಳ, ಸೃಷ್ಟಿಯಾದ ಉದ್ಯೋಗ ಎಷ್ಟು?
ಬೆಂಗಳೂರು, ಡಿಸೆಂಬರ್ 15: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಕಂಪನಿಗಳು ಆಸಕ್ತಿವಹಿಸಿವೆ ಎಂದು ಸರ್ಕಾರಗಳು ಆಗಾಗ ಹೇಳುತ್ತವೆ. ಹಾಗಾದರೆ 5 ವರ್ಷದಲ್ಲಿ ಕರ್ನಾಟಕಕ್ಕೆ ಹರಿದು ಬಂದ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಎಷ್ಟು?, ಇದರಿಂದಾಗಿ ಕರ್ನಾಟಕದಲ್ಲಿ ಸೃಷ್ಟಿಯಾದ ಉದ್ಯೋಗ ಎಷ್ಟು? ಎಂಬುದು ಪ್ರಶ್ನೆಯಾಗಿದೆ. ಈ ಕುರಿತು ಸರ್ಕಾರ ವಿಧಾನಸಭೆ ಕಲಾಪದಲ್ಲಿಯೇ ಉತ್ತರ ನೀಡಿದ್ದಾರೆ.
ಬೆಳಗಾವಿಯಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನಸಭೆಯಲ್ಲಿ ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಎಫ್‌ಡಿಐ ಕುರಿತು ಪ್ರಶ್ನೆ ಮಾಡಿದ್ದರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಎಂ. ಬಿ. ಪಾಟೀಲ ಇದಕ್ಕೆ ಉತ್ತರ ನೀಡಿದ್ದಾರೆ.

ಪ್ರಶ್ನೆ, ಉತ್ತರಗಳು: ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ವಿವಿಧ ಕೈಗಾರಿಕಾ ಹಾಗೂ ಸೇವಾ ಕ್ಷೇತ್ರದಲ್ಲಿ ವರ್ಷಗಳಲ್ಲಿ ರಾಜ್ಯಕ್ಕೆ ಹರಿದು ಬಂದ ವಿದೇಶಿ ನೇರ ಬಂಡವಾಳ ಎಷ್ಟು? ಎಂದು ಪ್ರಶ್ನೆ ಮಾಡಲಾಗಿತ್ತು. ಅಲ್ಲದೇ ವಿದೇಶಿ ನೇರ ಬಂಡವಾಳ ಹರಿದು ಬಂದ ಪರಿಣಾಮದಿಂದ ರಾಜ್ಯದಲ್ಲಿ ಹೊಸದಾಗಿ ಸೃಷ್ಟಿಯಾದ ಉದ್ಯೋಗ ಅವಕಾಶಗಳು ಎಷ್ಟು? ಎಂದು ಕೇಳಲಾಗಿತ್ತು. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಿದೇಶೀ ನೇರ ಬಂಡವಾಳ ಹರಿದು ಬರಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು? ಎಂದು ಪ್ರಶ್ನಿಸಲಾಗಿತ್ತು.
ಸರ್ಕಾರ ಉತ್ತರದಲ್ಲಿ ಕಳೆದ 5 ವರ್ಷಗಳಲ್ಲಿ ವಿವಿಧ ಕೈಗಾರಿಕಾ ಹಾಗೂ ಸೇವಾ ಕ್ಷೇತ್ರದಲ್ಲಿ ರಾಜ್ಯಕ್ಕೆ ಹರಿದು ಬಂದ ವಿದೇಶಿ ನೇರ ಬಂಡವಾಳ ರೂ. 4,19,081 ಕೋಟಿಯಾಗಿರುತ್ತದೆ ಎಂದು ಹೇಳಿದೆ. ಈ ಪೈಕಿ ಕಳೆದ 5 ವರ್ಷಗಳಲ್ಲಿ SHLCC ಸಭೆಗಳಲ್ಲಿ ಒಟ್ಟು 13 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಒಟ್ಟು ರೂ. 38,225.31 ಕೋಟಿ ವಿದೇಶಿ ನೇರ ಬಂಡವಾಳ ಹರಿದು ಬರುತ್ತದೆ ಹಾಗೂ 91,666 ಉದ್ಯೋಗ ಅವಕಾಶಗಳು ಇರುತ್ತವೆ ಎಂದು ಸರ್ಕಾರ ತಿಳಿಸಿದೆ. ಇದರಲ್ಲಿ ಒಟ್ಟು 5 ಯೋಜನೆಗಳು ಅನುಷ್ಠಾನಗೊಂಡಿದ್ದು, 11,382 ಜನರಿಗೆ ಉದ್ಯೋಗ ಸೃಜನೆಯಾಗಿರುತ್ತದೆ ಎಂದು ಸರ್ಕಾರ ಉತ್ತರ ಕೊಟ್ಟಿದೆ.
ರಾಜ್ಯದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ವಿದೇಶೀ ನೇರ ಬಂಡವಾಳವನ್ನು ಆಕರ್ಷಿಸಲು ಇನ್ವೆಸ್ಟ್ ಕರ್ನಾಟಕ ಫೋರಂ ವಿದೇಶಿ ಪ್ರವಾಸಗಳನ್ನು ಕೈಗೊಂಡು, ಅಲ್ಲಿರುವ ವಿದೇಶಿ ಕಂಪನಿಗಳೊಂದಿಗೆ ರಾಜ್ಯದಲ್ಲಿ ಹೂಡಿಕೆ ಮಾಡಲು ಒಡಂಬಡಿಕೆ ಮಾಡಿಕೊಂಡು ವಿದೇಶಿ ನೇರ ಬಂಡವಾಳ ಹೆಚ್ಚಿಸಲು ಸಹಾಯ ಮಾಡುತ್ತಿದೆ.
ಕಳೆದೆರಡು ವರ್ಷಗಳಿಂದ ವಿದೇಶಿ ಪ್ರವಾಸ ಕೈಗೊಂಡ ವಿವರ ಹಾಗೂ ವಿವಿಧ ಕಂಪನಿಗಳ ಮೂಲಕ ಬಂಡವಾಳ ಹೂಡಿಕೆಯ ಭರವಸೆ ಸಿಕ್ಕಿರುವ ಮಾಹಿತಿಗಳನ್ನು ಸರ್ಕಾರ ನೀಡಿದೆ.
* ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಬಂಡವಾಳ ಹೂಡಿಕೆಯ ಭರವಸೆ/ ಒಡಂಬಡಿಕೆ 25,000 ಕೋಟಿ ರೂ.ಗಳು.
* ದಾವೋಸ್ ಸ್ವಿಟ್ಜರ್ ಲ್ಯಾಂಡ್ 23,285 ಕೋಟಿ ರೂ.ಗಳು.
* ಜಪಾನ್ ಮತ್ತು ದಕ್ಷಿಣ ಕೊರಿಯಾ 1390 ಕೋಟಿ ರೂ.ಗಳು
* ತೈವಾನ್ 15,000 ಕೋಟಿ ರೂ.ಗಳು
ಇದಲ್ಲದೇ ರಾಜ್ಯಕ್ಕೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಬೆಂಗಳೂರಿನಲ್ಲಿ ದಿನಾಂಕ 12 ರಿಂದ 14ನೇ ಫೆಬ್ರವರಿ 2025 ರವರೆಗೆ "ಇನ್ವೆಸ್ಟ್ ಕರ್ನಾಟಕ 2025: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ" ವನ್ನು ಆಯೋಜಿಸಲಾಗಿದೆ ಹಾಗೂ ದಿನಾಂಕ 10 ರಿಂದ 14ನೇ ಫೆಬ್ರವರಿ 2025 ರವರೆಗೆ ಬೆಂಗಳೂರಿನಲ್ಲಿರುವ ಯಲಹಂಕ ವಾಯು ನೆಲೆಯಲ್ಲಿ ಆಯೋಜಿಸಿರುವ ಏರೋ ಇಂಡಿಯಾ-2025ರಲ್ಲಿಯೂ ಸಹ ಭಾಗವಹಿಸಲಾಗುತ್ತಿದೆ.
ವಿದೇಶಿ ಬಂಡವಾಳ ಆಕರ್ಷಿಸಲು ಸರ್ಕಾರವು ಕೈಗಾರಿಕಾ ನೀತಿ, Electrical Vehicle ನೀತಿ ಮತ್ತು Aerospace & Defence ನೀತಿಗಳನ್ನು ಜಾರಿಗೆ ತಂದಿದ್ದು, ಈ ನೀತಿಗಳನ್ವಯ ಉತ್ತೇಜನ ಮತ್ತು ರಿಯಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications