Indian Post Recruitment: ಈ ಖಾಲಿ ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಸಲ್ಲಿಸಿ, 63,200 ರೂ.ವೇತನ
ಬೆಂಗಳೂರು, ಡಿಸೆಂಬರ್ 16: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಇದ್ದು, ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹ ಆಸಕ್ತರಿಗೆ 2025ರ ಜನವರಿ 12ವರೆಗೆ ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕವರೆಗೆ ಕಾಯದೇ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 19 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಉದ್ಯೋಗಗಳ ಹೆಸರು: ಸ್ಟಾಫ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 19
ಮಾಸಿಕ ವೇತನ: ನಿಯಮಾನುಸಾರ
ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ
ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ (ಆಫ್‌ಲೈನ್)
ವಿದ್ಯಾರ್ಹತೆ
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು ಎಂದು ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯಸ್ಸಿನ ಮಿತಿ
ಈ ಮೇಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.
ಮಾಸಿಕ ವೇತನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯ್ಕೆ ಆದಲ್ಲಿ ಅವರಿಗೆ ಮಾಸಿಕ ರೂ.19,900 ರಿಂದ 63,200 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ಬಿಹಾರ ರಾಜ್ಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಆಯ್ಕೆ ಹೇಗೆ ನಡೆಯಲಿದೆ
ಅರ್ಜಿ ಸಲ್ಲಿಸಿದವರಿಗೆ ಮೊದಲು ಟ್ರೇಡ್ ಟೆಸ್ಟ್ ಬಳಿಕ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು. ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ವಿಳಾಸ
ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್‌ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು 'ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ) ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಕಚೇರಿ, ಬಿಹಾರ ಸರ್ಕಲ್, ಪಾಟ್ನಾ-800001' ಗೆ ಅರ್ಜಿಯನ್ನು ಜನವರಿ 12ರೊಳಗೆ ಕಳುಹಿಸಬೇಕು..
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications