India Railway Jobs: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ಅರ್ಜಿ ಆಹ್ವಾನ
ಬೆಂಗಳೂರು, ಮೇ 11: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ. ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಖಾಲಿ ಇದ್ದು, ಆಸಕ್ತರು ಈ ಸದಾವಕಾಶವನ್ನು ಬಳಸಿಕೊಳ್ಳುವಂತೆ 'ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು' (RITES) ತಿಳಿಸಿದೆ.
ರೈಲ್ವೆ ಇಲಾಖೆಯು ತನ್ನಲ್ಲಿ ಖಾಲಿ ಇರುವ ಕೆಲವು ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. RITES ತನ್ನ ವ್ಯಾಪ್ತಿಯಲ್ಲಿ ಒಟ್ಟು 1 ಗ್ರೂಪ್ ಜನರಲ್ ಮ್ಯಾನೇಜರ್(ಸಿವಿಲ್) ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಮುಂದಿನ ತಿಂಗಳು ಜೂನ್ 17 ಕೊನೆಯ ದಿನಾಂಕ ಎಂದು ಹೇಳಲಾಗಿದೆ. ಅಭ್ಯರ್ಥಿಗಳು ಕೊನೆ ದಿನಾಂಕವರೆಗೂ ಕಾಯದೇ ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಇದಕ್ಕೂ ಮೊದಲು ವಿದ್ಯಾರ್ಹತೆ, ವೇತನ, ಅರ್ಜಿ ಸಲ್ಲಿಕೆ ವಿದಾನ ಇನ್ನಿತರ ನೇಮಕಾತಿಯ ಪೂರ್ಣ ಮಾಹಿತಿ ಇಲ್ಲಿ ತಿಳಿಯಬಹುದು.
ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ರೈಲ್ವೆ ಇಲಾಖೆ (RITES)
ಎಷ್ಟು ಹುದ್ದೆ ಇವೆ: ಒಂದು
ಹುದ್ದೆ ಹೆಸರು: ಗ್ರೂಪ್ ಜನರಲ್ ಮ್ಯಾನೇಜರ್(ಸಿವಿಲ್)
ವೇತನ: ನಿಗದಿ ಮಾಡಿಲ್ಲ
ಪೋಸ್ಟಿಂಗ್ : ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆ ದಿನ: 2024 ಜೂನ್ 17
ವಯಸ್ಸಿನ ಮಿತಿ
ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಯ ಕೊನೆ ದಿನವಾದ 2024 ಜೂನ್ 17ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ಅಧಿಸೂಚನೆ ಮಾಹಿತಿ ನೀಡಿದೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾರ್ಹತೆ/ಕ್ವಾಲಿಫಿಕೇಶನ್ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಸೇವಾ ವೃತ್ತಿ ಅನುಭವ ಹಾಗೂ ನೇರವಾಗಿ ಸಂದರ್ಶನ ನಡೆಸಿ ಶಾರ್ಟ್‌ಲಿಸ್ಟ್ ಮಾಡಲಾಗುವುದು. ಇಲ್ಲಿ ಆಯ್ಕೆ ಆಗುವವರಿಗೆ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುವುದು. ಸದ್ಯ ಮಾಸಿಕ ವೇತನ ಎಷ್ಟು ಎಂದು ನಿಗದಿ ಮಾಡಲಾಗಿಲ್ಲ. ನಿಯಮಾನುಸಾರ ಸಂಬಳ ಸಿಗಲಿದೆ.
ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಅರ್ಜಿ ಸಲ್ಲಿಕೆ ವಿಧಾನ
ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅದಕ್ಕಾಗಿ ಇಲ್ಲಿ ನೀಡಲಾಗಿರುವ https://recruit.rites.com/frmRegistration.aspx ಬಳಿಸಿ ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.












Click it and Unblock the Notifications