ಶಿವಮೊಗ್ಗ : ಜುಲೈ 17ರಿಂದ ರಾಜ್ಯ ಮಟ್ಟದ ವಾಯುಸೇನೆ ನೇಮಕಾತಿ

ಬೆಂಗಳೂರು, ಜೂನ್ 19 : 'ಭಾರತೀಯ ವಾಯುಸೇನೆ ಜುಲೈ 17 ರಿಂದ 22ರವರೆಗೆ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವಾಯುಸೇನೆ ನೇಮಕಾತಿಯನ್ನು ಆಯೋಜಿಸಿದೆ. ಪುರುಷ ಅಭ್ಯರ್ಥಿಗಳು ಆಯಾ ಜಿಲ್ಲೆಗೆ ನಿಗಧಿಪಡಿಸಿದ ದಿನಾಂಕದಂದು ಪಾಲ್ಗೊಳ್ಳಬಹುದಾಗಿದೆ' ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹೇಳಿದ್ದಾರೆ.

ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ವಾಯುಸೇನೆ ನೇಮಕಾತಿ ನಡೆಯಲಿದೆ. ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇಮಕಾತಿ ಬಗ್ಗೆ ಪೂರ್ವ ಸಿದ್ಧತಾ ಸಭೆಯನ್ನು ನಡೆಸಿದರು.

ನೇಮಕಾತಿಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ತರಗತಿಗಳನ್ನು ನಡೆಸಲು ನೋಡಲ್ ಅಧಿಕಾರಿ ಚಂದ್ರಪ್ಪ ಅವರಿಗೆ ಸೂಚನೆ ನೀಡಲಾಗಿದೆ.

Indian air force statewide recruitment rally 2019 Shivamogga

ದ್ವಿತೀಯ ಪಿಯುಸಿಯಲ್ಲಿ ಯಾವುದೇ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಆಂಗ್ಲ ಭಾಷೆಯಲ್ಲಿ ಕನಿಷ್ಟ 50ರಷ್ಟು ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳು ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೇಮಕಾತಿಯಲ್ಲಿ ಪಾಲ್ಗೊಳ್ಳುವವರಿಗೆ ನಿಗದಿ ಪಡಿಸಿದ ಎತ್ತರ ಹಾಗೂ ತೂಕ ಹೊಂದಿರಬೇಕು. 1999ರ ಜುಲೈ ನಿಂದ 2003ರ ಜುಲೈ 01ರೊಳಗಾಗಿ ಜನಿಸಿದ ಅಭ್ಯರ್ಥಿಗಳಾಗಿರಬೇಕು.

ಅಭ್ಯರ್ಥಿಯು ಆಗಮಿಸುವಾಗ ವಿದ್ಯಾರ್ಹತೆಯ ಮೂಲ ಹಾಗೂ ನಾಲ್ಕು ನಕಲು ಪ್ರತಿಗಳು ಹಾಗೂ 30 ಭಾವಚಿತ್ರಗಳು, ಆಧಾರ್ ಕಾರ್ಡ್ ಇತ್ಯಾದಿಗಳನ್ನು ತರಬೇಕು ಎಂದು ಮನವಿ ಮಾಡಲಾಗಿದೆ.

ವೇತನದ ವಿವರ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ.ಗಳ ವೇತನ ಹಾಗೂ ಭತ್ಯೆಗಳನ್ನು ನೀಡಲಾಗುತ್ತದೆ. ನೇಮಕಾತಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ, ಸೌಲಭ್ಯಗಳನ್ನು ಒದಗಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಯಾವ ದಿನ, ಯಾವ ಜಿಲ್ಲೆಯವರಿಗೆ ಅವಕಾಶ : ಜುಲೈ 17 ಮತ್ತು 18 ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳು ಆಗಮಿಸಬಹುದು.

ಜುಲೈ 21 ಮತ್ತು 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ(ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಗದಗ, ಕೊಪ್ಪಳ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+