191 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದ ಭಾರತೀಯ ಸೇನೆ
ಬೆಂಗಳೂರು, ಜನವರಿ 30 : ಭಾರತೀಯ ಸೇನೆ 191 ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 21 ಫೆಬ್ರವರಿ 2019 ಕೊನೆಯ ದಿನವಾಗಿದೆ.
ಭಾರತೀಯ ಸೇನೆ 191 ಎಸ್‌ಎಸ್‌ಸಿ ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಬಿಇ, ಬಿಟೆಕ್ ಅಥವ ಯಾವುದೇ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಅಕ್ಟೋಬರ್ 2019ಕ್ಕೆ ಅನ್ವಯವಾಗುವಂತೆ).
ವೇತನ ಶ್ರೇಣಿ : 56100-177500 ರೂ. ಪ್ರತಿ ತಿಂಗಳು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಅಭ್ಯರ್ಥಿಗಳನ್ನು ಸಂದರ್ಶನ, ದೈಹಿಕ ಪರೀಕ್ಷೆ, ವೈದ್ಯಕಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ











Click it and Unblock the Notifications