417 ಹುದ್ದೆ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಇಂಡಿಯನ್ ಬ್ಯಾಂಕ್
ಬೆಂಗಳೂರು, ಆಗಸ್ಟ್ 16 : ಇಂಡಿಯನ್ ಬ್ಯಾಂಕ್ 417 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 27, 2018 ಕೊನೆಯ ದಿನವಾಗಿದೆ.
ಇಂಡಿಯನ್ ಬ್ಯಾಂಕ್ 417 Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯನ್ನು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತತ್ಸಮಾನ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಆಗಸ್ಟ್ 2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಗಳು, ಉಳಿದ ವರ್ಗದ ಅಭ್ಯರ್ಥಿಗಳಿಗೆ 600 ರೂ.ಗಳು.
ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications