115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಬ್ಯಾಂಕ್‌

ಬೆಂಗಳೂರು, ಅಕ್ಟೋಬರ್ 15 : ಇಂಡಿಯನ್ ಬ್ಯಾಂಕ್ 115 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 8/11/2019 ಕೊನೆಯ ದಿನವಾಗಿದೆ.

ಇಂಡಿಯನ್ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಕಮ್ ಪ್ಯುನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವವರಿಗೆ 18 ರಿಂದ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜುಲೈ 2019ಕ್ಕೆ ಅನ್ವಯವಾಗುವಂತೆ.

Indian Bank Recruitment 2019 Apply For 115 post

ಆಯ್ಕೆಯಾದ ಅಭ್ಯರ್ಥಿಗಳಿಗೆ 9560-18545 ರೂ. ಪ್ರತಿ ತಿಂಗಳ ವೇತನವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಅಭ್ಯರ್ಥಿಗಳನ್ನು Objective type ಆನ್‌ಲೈನ್ ಪರೀಕ್ಷೆ, ಪ್ರಾದೇಶಿಕ ಭಾಷಾ ಪರೀಕ್ಷೆ, ದೈಹಿಕ ಸಾಮರ್ಥ್ಯ, ವಾಹನಾ ಚಾಲನಾ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು 14/10/2019 ರಿಂದ 8/11/2019ರ ತನಕ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+