ಪಿಯುಸಿ ಪಾಸ್ ಆದವರಿಗೆ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸವಿದೆ
ಬೆಂಗಳೂರು, ಜುಲೈ 02 : ಭಾರತೀಯ ಕರಾವಳಿ ರಕ್ಷಣಾ ಪಡೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 10, 2018 ಕೊನೆಯ ದಿನವಾಗಿದೆ.
ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ನಾವಿಕ್ (ಜನರಲ್ ಡ್ಯೂಟಿ) ಹುದ್ದೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ಉತ್ತೀರ್ಣರಾಗಿರಬೇಕು ಶೇ 50ರಷ್ಟು ಅಂಕಗಳೊಂದಿಗೆ. ಗಣಿತ ಮತ್ತು ಜೀವಶಾಸ್ತ್ರದಲ್ಲಿ ಶೇ 50 ರಷ್ಟು ಅಂಕಗಳನ್ನು ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ವ್ಯಾಸಂಗ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 22 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಫೆಬ್ರವರಿ 1, 1997 ರಿಂದ ಜನವರಿ 31, 2001ರೊಳಗೆ ಜನಿಸಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications