ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ: 260 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 08: ಭಾರತೀಯ ಕರಾವಳಿ ರಕ್ಷಣಾ ಪಡೆ 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ಅಧಿಕೃತವಾಗಿ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.
ನಾವಿಕ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಫೆಬ್ರವರಿ 02, 2020ರೊಳಗೆ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: ಭಾರತೀಯ ಕರಾವಳಿ ರಕ್ಷಣಾ ಪಡೆ(Indian Coast Guard)
ಹುದ್ದೆ ಹೆಸರು: Navik (ಜನರಲ್ ಡ್ಯೂಟಿ)
ಒಟ್ಟು ಹುದ್ದೆ: 260
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 02.02.2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು 10+2 ಉತ್ತೀರ್ಣರಾಗಿರಬೇಕು ಶೇ 50ರಷ್ಟು ಅಂಕಗಳೊಂದಿಗೆ. ಗಣಿತ ಮತ್ತು ಜೀವಶಾಸ್ತ್ರದಲ್ಲಿ ಶೇ 50 ರಷ್ಟು ಅಂಕಗಳನ್ನು ಪಡೆದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 22 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಿನಾಯಿತಿ ಸಿಗಲಿದೆ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 26.01.2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 02.02. 2020
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications