ಕಾರವಾರ ನೌಕಾ ನೆಲೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 10 : ಕಾರವಾರದ ಸೀಬರ್ಡ್ ನೌಕಾ ನೆಲೆಯ ಹಡಗು ದುರಸ್ತಿ ಯಾರ್ಡ್ ನಲ್ಲಿ ಖಾಲಿ ಇರುವ 105 ಶಿಷ್ಯವೃತ್ತಿ ತರಬೇತಿ (Apprenticeship Training) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಭಾರತೀಯ ನೌಕಾ ಪಡೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 10 ನವೆಂಬರ್, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯಥಿಗಳು ಎಸ್ ಎಸ್ ಎಲ್ ಸಿಯಲ್ಲಿ ಶೇ.50 ಅಂಕ ಹಾಗೂ ಐಟಿಐನಲ್ಲಿ ಶೇ 65ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ವೇತನ ಶ್ರೇಣಿ: 8320 ರಿಂದ 9360 ರು. ತಿಂಗಳಿಗೆ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications