102 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದ ಭಾರತೀಯ ನೌಕಾಪಡೆ
ಬೆಂಗಳೂರು, ಜನವರಿ 17 : ಭಾರತೀಯ ನೌಕಾಪಡೆ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 1/2/2019 ಕೊನೆಯ ದಿನವಾಗಿದೆ.
ಭಾರತೀಯ ನೌಕಾಪಡೆ 102 ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಎಸ್‌ಎಸ್‌ಬಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು 5 ಮತ್ತು 7ನೇ ಸೆಮಿಸ್ಟರ್‌ನಲ್ಲಿ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು.

ವಯೋಮಿತಿ ವಿವರ : ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 1995ರ ಜನವರಿ 2 ರಿಂದ 1 ಜುಲೈ 2000 ದೊಳಗೆ ಜನಿಸಿರಬೇಕು.
ವೇತನ ಶ್ರೇಣಿ : 56100-212400. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications