ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 527 ಅಪ್ರೆಂಟಿಸ್ ಹುದ್ದೆಗಳಿವೆ
ನವದೆಹಲಿ, ನವೆಂಬರ್ 23: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 527 ತಾಂತ್ರಿಕ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 4, 2021ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್
ಒಟ್ಟು ಹುದ್ದೆ: 527
ಹುದ್ದೆ ಹೆಸರು: Technical & Non-Technical Apprentice
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 4, 2021
ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರೂಮೆಂಟ್ ಮೆಕ್ಯಾನಿಕ್, ಮಷಿನಿಸ್ಟ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಅಲ್ಲದೆ ಡೇಟಾ ಎಂಟ್ರಿ ಆಪರೇಟರ್, ರೀಟೆಲ್ ಸೇಲ್ಸ್ ಅಸೋಸಿಯೇಟ್ ಮುಂತಾದ ತಾಂತ್ರಿಕೇತರ ಹುದ್ದೆಗಳಿವೆ.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಸಂಬಂಧಪಟ್ಟ ಟ್ರೇಡ್ ಅನುಭವ, ಡಿಪ್ಲೋಮಾ.

ವಯೋಮಿತಿ:
ವಿವಿಧ ಹುದ್ದೆಗಳಿಗೆ ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ ಕನಿಷ್ಠ 18 ರಿಂದ ಗರಿಷ್ಠ 24 ವರ್ಷ. ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಸಿಗಲಿದೆ.
ಶುಲ್ಕಪಾವತಿ ವಿಧಾನ: ಆನ್ ಲೈನ್ ಮೂಲಕ ಎಸ್ ಬಿ ಐ ಇ-ಕಲೆಕ್ಟ್
ನೇಮಕಾತಿ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ), ಕೌಶಲ್ಯ ಪರೀಕ್ಷೆ, ಲಿಖಿತ ಪರೀಕ್ಷೆಯಲ್ಲಿ ಶೇ 40ರಷ್ಟು ಅಂಕ ಗಳಿಸಿ ಮುಂದಿನ ಹಂತಕ್ಕೆ ಅರ್ಹರಾಗಬಹುದು. ವೈಯಕ್ತಿಕ ಸಂದರ್ಶನ (ಪಿಐ). ಇದು 12 ತಿಂಗಳ ಅವಧಿಯ ಟ್ರೇಡ್ ಅಪ್ರೆಂಟಿಸ್ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಸ್ಟೈಪೆಂಡ್ ಸಿಗಲಿದೆ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 4/12/2021
ಪರೀಕ್ಷಾ ಸಂಭಾವ್ಯ ದಿನಾಂಕ: 19/12/2021
ಅರ್ಜಿ ಸಲ್ಲಿಸುವ ವಿಧಾನ:
* ಇಂಡಿಯನ್ ಆಯಿಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆನ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಆಯಿಲ್ ಇಂಡಿಯಾ ಅಧಿಕೃತ ವೆಬ್ ತಾಣದ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿ ಪಡೆಯಲು ಇಂಡಿಯನ್ ಆಯಿಲ್ ಸಂಸ್ಥೆ ಹೊರಡಿಸಿರುವ ಅಧಿಕೃತ ನೋಟಿಫಿಕೇಷನ್ ಓದಿ
Recommended Video
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications