Get Updates
Get notified of breaking news, exclusive insights, and must-see stories!

ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ 300 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿವೆ

ಬೆಂಗಳೂರು, ಡಿಸೆಂಬರ್ 12: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 300 ಟ್ರೇಡ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 27, 2021ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್
ಒಟ್ಟು ಹುದ್ದೆ: 300
ಹುದ್ದೆ ಹೆಸರು: Trade Apprentice
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 27, 2021

ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರೂಮೆಂಟ್ ಮೆಕ್ಯಾನಿಕ್, ಮಷಿನಿಸ್ಟ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಮುಂತಾದ ತಾಂತ್ರಿಕ ಹುದ್ದೆಗಳಿವೆ.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಐಟಿಐ ಹಾಗೂ ಸಂಬಂಧಪಟ್ಟ ಟ್ರೇಡ್ ಅನುಭವ

ರಾಜ್ಯವಾರು ಹುದ್ದೆಗಳ ಸಂಖ್ಯೆ ವಿವರ

  • ತಮಿಳುನಾಡು ಹಾಗೂ ಪುದುಚೇರಿ: 84 ಹುದ್ದೆಗಳು
  • ಕರ್ನಾಟಕ: 52
  • ಕೇರಳ: 49
  • ಆಂಧ್ರಪ್ರದೇಶ: 55
  • ತೆಲಂಗಾಣ: 60
Indian Oil Corporation Recruitment 2021: Apply for Trade Apprentice

ವಯೋಮಿತಿ:

ವಿವಿಧ ಹುದ್ದೆಗಳಿಗೆ ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ ಕನಿಷ್ಠ 18 ರಿಂದ ಗರಿಷ್ಠ 24 ವರ್ಷ. ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಸಿಗಲಿದೆ.

ಶುಲ್ಕಪಾವತಿ ವಿಧಾನ: ಆನ್ ಲೈನ್ ಮೂಲಕ ಎಸ್ ಬಿ ಐ ಇ-ಕಲೆಕ್ಟ್

ನೇಮಕಾತಿ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ), ಕೌಶಲ್ಯ ಪರೀಕ್ಷೆ, ಬಹು ಆಯ್ಕೆಯ ಲಿಖಿತ ಪರೀಕ್ಷೆಯಲ್ಲಿ ಶೇ 40ರಷ್ಟು ಅಂಕ ಗಳಿಸಿ ಮುಂದಿನ ಹಂತಕ್ಕೆ ಅರ್ಹರಾಗಬಹುದು. ವೈಯಕ್ತಿಕ ಸಂದರ್ಶನ (ಪಿಐ). ಇದು 12 ತಿಂಗಳ ಅವಧಿಯ ಟ್ರೇಡ್ ಅಪ್ರೆಂಟಿಸ್ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಸ್ಟೈಪೆಂಡ್ ಸಿಗಲಿದೆ.

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10/12/2021
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27/12/2021
ಸಂಭಾವ್ಯ ಪರೀಕ್ಷಾ ದಿನಾಂಕ: ಜನವರಿ 9, 2022
ಪರೀಕ್ಷಾ ಫಲಿತಾಂಶ: ಜನವರಿ 17, 2022

ಅರ್ಜಿ ಸಲ್ಲಿಸುವ ವಿಧಾನ:
* ಇಂಡಿಯನ್ ಆಯಿಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆನ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ಅಭ್ಯರ್ಥಿಗಳು ತಮಿಳುನಾಡು, ಪುದುಚೇರಿ, ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.

ಹೆಚ್ಚಿನ ಮಾಹಿತಿ ಪಡೆಯಲು ಇಂಡಿಯನ್ ಆಯಿಲ್ ಸಂಸ್ಥೆ ಹೊರಡಿಸಿರುವ ಅಧಿಕೃತ ನೋಟಿಫಿಕೇಷನ್ ಓದಿ

Recommended Video

      BCCI ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ರೆಡಿಯಾದ್ರು ವಿರಾಟ್ | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಆಯಿಲ್ ಇಂಡಿಯಾ ಅಧಿಕೃತ ವೆಬ್ ತಾಣದ ಕ್ಲಿಕ್ ಮಾಡಿ

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+