ಇಂಡಿಯನ್ ಆಯಿಲ್ ಸಂಸ್ಥೆಯಲ್ಲಿ ನೂರಕ್ಕೂ ಹೆಚ್ಚು ಹುದ್ದೆಗಳಿವೆ
ಬೆಂಗಳೂರು, ಜನವರಿ 31: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 100 ಕ್ಕೂ ಅಧಿಕ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 18, 2022ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್
ಒಟ್ಟು ಹುದ್ದೆ: 100+
ಹುದ್ದೆ ಹೆಸರು: Non- Executive
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 18, 2022
ಸಂಬಳ ನಿರೀಕ್ಷೆ:
ಇಂಜಿನಿಯರಿಂಗ್ ಸಹಾಯಕ: 25000-105000 ರು
ತಾಂತ್ರಿಕ ಸಹಾಯಕ: 23000-78000 ರು
ಹುದ್ದೆ ಹೆಸರು: ಇಂಜಿನಿಯರಿಂಗ್ ಸಹಾಯಕ(ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಆಪರೇಷನ್ಸ್), ತಾಂತ್ರಿಕ ಸಹಾಯಕ, ಫಿಟ್ಟರ್,ಟರ್ನರ್, ಮೆಕ್ಯಾನಿಕ್, ವೈರ್ ಮನ್, ಡ್ರಾಫ್ಟ್ ಮನ್ಸ್, .. ಇನ್ನಿತರ ಐಟಿಐ ಟ್ರೇಡ್

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಐಟಿಐ ಹಾಗೂ ಸಂಬಂಧಪಟ್ಟ ಟ್ರೇಡ್ ಅನುಭವ.
ಇಂಜಿನಿಯರಿಂಗ್ ಸಹಾಯಕ: ಡಿಪ್ಲೋಮಾ, ಮೆಕ್ಯಾನಿಕಲ್, ಆಟೋಮೊಬೈಲ್ ಇಂಜಿನಿಯರ್ ಪದವಿ ಶೇ 55ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು.ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಂತೆ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಿನಾಯತಿ ಸಿಗಲಿದೆ.
ವಯೋಮಿತಿ:
ವಿವಿಧ ಹುದ್ದೆಗಳಿಗೆ ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ ಕನಿಷ್ಠ 18 ರಿಂದ ಗರಿಷ್ಠ 26 ವರ್ಷ (ಜನವರಿ 24, 2022ರಂತೆ). ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಸಿಗಲಿದೆ.
ಶುಲ್ಕಪಾವತಿ ವಿಧಾನ: ಆನ್ ಲೈನ್ ಮೂಲಕ ಎಸ್ ಬಿ ಐ ಇ-ಕಲೆಕ್ಟ್
ನೇಮಕಾತಿ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ), ಕೌಶಲ್ಯ ಪರೀಕ್ಷೆ, ಬಹು ಆಯ್ಕೆಯ ಲಿಖಿತ ಪರೀಕ್ಷೆಯಲ್ಲಿ ಶೇ 40ರಷ್ಟು ಅಂಕ ಗಳಿಸಿ ಮುಂದಿನ ಹಂತಕ್ಕೆ ಅರ್ಹರಾಗಬಹುದು. ವೈಯಕ್ತಿಕ ಸಂದರ್ಶನ (ಪಿಐ). ಇದು 12 ತಿಂಗಳ ಅವಧಿಯ ಟ್ರೇಡ್ ಅಪ್ರೆಂಟಿಸ್ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಸ್ಟೈಪೆಂಡ್ ಸಿಗಲಿದೆ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24/01/2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18/02/2022
ಅರ್ಜಿ ಸಲ್ಲಿಸುವ ವಿಧಾನ:
* ಇಂಡಿಯನ್ ಆಯಿಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ. (https://plapps.indianoil.in/)
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆನ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ಅಭ್ಯರ್ಥಿಗಳು ತಮ್ಮ ಹುದ್ದೆ ಹಾಗೂ ಸಂಬಂಧಪಟ್ಟ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಹೆಚ್ಚಿನ ಮಾಹಿತಿ ಪಡೆಯಲು ಇಂಡಿಯನ್ ಆಯಿಲ್ ಸಂಸ್ಥೆ ಹೊರಡಿಸಿರುವ ಅಧಿಕೃತ ನೋಟಿಫಿಕೇಷನ್ ಓದಿ
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಆಯಿಲ್ ಇಂಡಿಯಾ ಅಧಿಕೃತ ವೆಬ್ ತಾಣದ ಕ್ಲಿಕ್ ಮಾಡಿ (www.iocl.com)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications