Post Office Recruitment: ಅಂಚೆ ಇಲಾಖೆಯಲ್ಲಿ ಸಾವಿರಾರು ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಹಾಕಿ
ಬೆಂಗಳೂರು, ಜನವರಿ 09: ಭಾರತೀಯ ಅಂಚೆ ಇಲಾಖೆ ವತಿಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯಬೇಕು ಎಂಬ ಆಸೆ ಇರುವ ಉದ್ಯೋಗಾಕಾಂಕ್ಷಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ಭಾರತೀಯ ಅಂಚೆ ಕಚೇರಿಗಳಲ್ಲಿ ಬಹುಕಾರ್ಯ ಸಿಬ್ಬಂದಿ (MTS) ಬರೋಬ್ಬರಿ 18200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಕನಿಷ್ಠ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರು ಎಂದು ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳ ವಯೋಮಿತಿ, ಮಾಸಿಕ ವೇತನ, ಆರ್ಜಿ ಸಲ್ಲಿಕೆ ಕೊನೆಯ ದಿನಾಂಕ, ವಿದ್ಯಾರ್ಹತೆ, ನೇಮಕಾತಿಯ ಪ್ರಮುಖ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಬಹುಕಾರ್ಯ ಸಿಬ್ಬಂದಿ (MTS)
ಒಟ್ಟು ಹುದ್ದೆಗಳು: 18,200 ಹುದ್ದೆಗಳು
ಪೋಸ್ಟಿಂಗ್: ಭಾರತ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಜನವರಿ 28
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ
ಶೈಕ್ಷಣಿಕ ಅರ್ಹತೆ
ಈ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆ ಗೊತ್ತಿರುವ ಜೊತೆಗೆ ಕನಿಷ್ಠ ಕಂಪ್ಯೂಟರ್ ಜ್ಞಾನ ಇರಬೇಕು.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಅಭ್ಯರ್ಥಿಗಳ SSLC ಅಂಕಪಟ್ಟಿ, ಪ್ರವೇಶ ಪತ್ರ
* ಪಾಸಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ
* ಆಧಾರ್ ಗುರುತಿನ ಚೀಟಿ
* ಜಾತಿ ಪ್ರಮಾಣ ಪತ್ರ
* ಜನ್ಮ ಪ್ರಮಾಣ ಪತ್ರ
ವಯಸ್ಸಿನ ಮಿತಿ
ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾದ ಮಾಹಿತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 18 ಹಾಗೂ ಗರಿಷ್ಠ 25 ವರ್ಷಗಳಾಗಿರಬೇಕು. ಜಾತಿ ಆಧಾರದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಸಿಗಬಹುದು.
ಆಯ್ಕೆ ಪ್ರಕ್ರಿಯೆ- ಮಾಸಿಕ ವೇತನ ಎಷ್ಟು?
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸು ಅಭ್ಯರ್ಥಿಗಳನ್ನು ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕ ಆಗುವವರಿಗೆ ಮಾಸಿಕವಾಗಿ 15000 ರೂಪಾಯಿಂದ 29380 ರೂಪಾಯಿ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ, ವಿಧಾನ ತಿಳಿಯಿರಿ
ಅಭ್ಯರ್ಥಿಗಳು ಜನವರಿ 28ರೊಳಗೆ ಅಂಚೆ ಇಲಾಖೆ ಅಧಿಕೃತ ಜಾಲತಾಣ https://www.indiapost.gov.in/ ಗೆ ಭೇಟಿ ನೀಡಬೇಕು. ಇಲ್ಲಿ ನೋಂದಾಯಿಸಿಕೊಂಡು ಅಗತ್ಯ ದಾಖಲೆಗಳ ಸಮೇತವಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿಕೊಳ್ಳಬೇಕು..
ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೆ ಕಾಯದೇ ಈ ಕೂಡಲೇ ಅರ್ಹ ದಾಖಲೆಗಳ ಸಮೇತ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಬಳಿಕ ಕಾಲ ಕಾಲಕ್ಕೆ ಅಂಚೆ ಇಲಾಖೆ ನೀಡುವ ಸುತ್ತೋಲೆ, ಪ್ರಕಟಣೆಗಳನ್ನು ಗಮನಿಸುತ್ತಿರಬೇಕು.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications