ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂಚೆ ಇಲಾಖೆ ನೇಮಕಾತಿ; ವಿದ್ಯಾರ್ಹತೆ 10ನೇ ತರಗತಿ

|
Google Oneindia Kannada News

ಬೆಂಗಳೂರು, ಆಗಸ್ಟ್ 07 : ಭಾರತೀಯ ಅಂಚೆ ಇಲಾಖೆ 10 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ವೃತ್ತದಲ್ಲಿ 2637 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ.

ಅಂಚೆ ಇಲಾಖೆ ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್, ದಕ್ ಸೇವಕ್ (ಅಂಚೆ ಸೇವಕ) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 4, 2019 ಕೊನೆಯ ದಿನವಾಗಿದೆ.

ಯುಪಿಎಸ್‌ಸಿ ನೇಮಕಾತಿ : 896 ಹುದ್ದೆಗಳಿಗೆ ಅರ್ಜಿ ಹಾಕಿಯುಪಿಎಸ್‌ಸಿ ನೇಮಕಾತಿ : 896 ಹುದ್ದೆಗಳಿಗೆ ಅರ್ಜಿ ಹಾಕಿ

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರ ತನಕ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರೆಪ್ಕೊ ಬ್ಯಾಂಕಿನಲ್ಲಿ ಸಹಾಯಕ ಮ್ಯಾನೇಜರ್ ಹುದ್ದೆಗಳಿವೆರೆಪ್ಕೊ ಬ್ಯಾಂಕಿನಲ್ಲಿ ಸಹಾಯಕ ಮ್ಯಾನೇಜರ್ ಹುದ್ದೆಗಳಿವೆ

ಯಾವ ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಒಬ್ಬ ಅಭ್ಯರ್ಥಿ ಗರಿಷ್ಠ 20 ವೃತ್ತದಲ್ಲಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ....

ಕರ್ನಾಟಕ ಹೈಕೋರ್ಟಿನಲ್ಲಿ 56 ಹುದ್ದೆಗಳಿಗೆ ಅರ್ಜಿ ಆಹ್ವಾನಕರ್ನಾಟಕ ಹೈಕೋರ್ಟಿನಲ್ಲಿ 56 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸಲು ವೆಬ್ ಸೈಟ್ ವಿಳಾಸ

ಹುದ್ದೆಗಳ ವಿವರಗಳು

ಹುದ್ದೆಗಳ ವಿವರಗಳು

ಕರ್ನಾಟಕ ವೃತ್ತದಲ್ಲಿ 2637 ಹುದ್ದೆಗಳಿವೆ. ಇವುಗಳಲ್ಲಿ ಸಾಮಾನ್ಯ ವರ್ಗಕ್ಕೆ 1,109 ಹುದ್ದೆ. ಇತರೆ ಹಿಂದುಳಿದ ವರ್ಗದವರಿಗೆ 630, ಎಸ್‌ಸಿ ಅಭ್ಯರ್ಥಿಗಳಿಗೆ 361, ಎಸ್‌ಟಿ ಅಭ್ಯರ್ಥಿಗಳಿಗೆ 174, ವಿಕಲಚೇತನ ಅಭ್ಯರ್ಥಿಗಳಿಗೆ 103 ಮತ್ತು ಆರ್ಥಿಕ ದುರ್ಬಲ ವರ್ಗದವರಿಗೆ 103 ಹುದ್ದೆಗಳನ್ನು ಮೀಸಲಾಗಿಡಲಾಗಿದೆ.

ವಿದ್ಯಾರ್ಹತೆಯ ವಿವರ

ವಿದ್ಯಾರ್ಹತೆಯ ವಿವರ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ/ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಅಧ್ಯಯನ ಮಾಡಿರುವುದು ಕಡ್ಡಾಯ.

ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಪಡೆದಿರಬೇಕು. 60 ದಿನಗಳ ಕಂಪ್ಯೂಟರ್ ಟ್ರೇನಿಂಗ್ ಕೋರ್ಸ್ ಪೂರ್ಣಗೊಳಿಸಿರಬೇಕು, ಪ್ರಮಾಣ ಪತ್ರ ಇರಬೇಕು. ಒಂದು ವೇಳೆ ಕಂಪ್ಯೂಟರ್ ಅನ್ನು ಒಂದು ವಿಷಯವಾಗಿ ಓದಿದ್ದರೆ ಪ್ರಮಾಣ ಪತ್ರದ ಅಗತ್ಯವಿಲ್ಲ. ದ್ವಿ ಚಕ್ರ ವಾಹನ ಚಾಲನೆ ಕೂಡಾ ತಿಳಿದಿರಬೇಕು.

ವಯೋಮಿತಿ ವಿವರ

ವಯೋಮಿತಿ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು. ಮೀಸಲಾತಿ ನಿಯಮದಂತೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ ಎಷ್ಟು?

ವೇತನ ಶ್ರೇಣಿ ಎಷ್ಟು?

ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 12 ರಿಂದ 14, 500 ರೂ., ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ ಮತ್ತು ದಕ್ ಸೇವಕ್ (ಅಂಚೆ ಸೇವಕ) ಹುದ್ದೆಗಳಿಗೆ 10 ರಿಂದ 12 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಆಧರಿಸಿ ಆಯ್ಕೆ ನಡೆಯಲಿದೆ. ಇಬ್ಬರು ಸಮಾನದ ಅಂಕಗಳನ್ನು ಪಡೆದಿದ್ದಲ್ಲಿ ವಯೋಮಿತಿಯನ್ನು ಮಾನದಂಡವಾಗಿ ಪರಿಗಣಿಸಿ ಹಿರಿತನದ ಆಧಾರದಲ್ಲಿ ಆಯ್ಕೆ ನಡೆಯಲಿದೆ.

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಶುಲ್ಕ ಎಷ್ಟು?

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿ/ ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ವರ್ಗದವರಿಗೆ 100 ರೂ. ಶುಲ್ಕವಿದೆ. ಮಹಿಳೆ, ಅಂಗವಿಕಲ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

English summary
Indian Postal Recruitment 2019. Apply for more than 10 thousand post. In Karnataka 2637 post. September 4, 2019 last date to apply through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X