ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Indian Post Recruitment 2023: ಇಲಾಖೆಯ 40,889 ಖಾಲಿ ಹುದ್ದೆಗಳಿಗೆ ಫೆ.16 ರೊಳಗೆ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯು ಭಾರತಾದ್ಯಂತ ತನ್ನ ಶಾಖೆಗಳಲ್ಲಿ ಖಾಲಿರುವ ಸುಮಾರು 40,000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಏನಿದೆ, ವಯೋಮಿತಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ವಿಧಾನ ಸೇರಿದಂತೆ ಅಗತ್ಯ ಮಾಹಿತಿ ಇ

|
Google Oneindia Kannada News

ಬೆಂಗಳೂರು, ಜನವರಿ 29: ಭಾರತೀಯ ಅಂಚೆ ಇಲಾಖೆಯು ಭಾರತಾದ್ಯಂತ ತನ್ನ ಶಾಖೆಗಳಲ್ಲಿ ಖಾಲಿರುವ ಸುಮಾರು 40,000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರುವರಿ 16ರೊಳಗೆ ಅರ್ಜಿ ಸಲ್ಲಿಸುವಂತೆ ಅಧಿಸೂಚನೆ ತಿಳಿಸಿದೆ.

ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಒಟ್ಟು 40,889 ವಿವಿಧ ಹೆಸರಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಹುದ್ದೆಗಳು ಇವೆ. ಆಸಕ್ತರು ಕೂಡಲೇ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.

Indian Post Recruitment 2023: Invites Applications For 40,889, Apply By Feb 16th, Details Inside

ಭಾರತೀಯ ಅಂಚೆ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಭಾರತೀಯರಿಗೆ ಇದೊಂದು ಸುವರ್ಣ ಅವಕಾಶ. ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಏನಿದೆ, ವಯೋಮಿತಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ವಿಧಾನ ಸೇರಿದಂತೆ ಅಗತ್ಯ ಮಾಹಿತಿ ಇಲ್ಲಿ ತಿಳಿಯಬಹುದು.

ಉದ್ಯೋಗದ ವಿವರ
ಸಂಸ್ಥೆ- ಭಾರತೀಯ ಅಂಚೆ ಇಲಾಖೆ
ಒಟ್ಟು ಹುದ್ದೆಗಳು- 40889
ಕರ್ನಾಟಕದಲ್ಲಿ ಖಾಲಿ ಹುದ್ದೆ- 3036
ಹುದ್ದೆಯ ಸ್ಥಳ- ಭಾರತಾದ್ಯಂತ

ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀಣವಾಗಿರುವವರು ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಮೀತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ವಯಸ್ಸಾಗಿರಬೇಕು. ಅಧಿಸೂಚನೆಯಲ್ಲಿ ನೀಡಿರುವ ಪ್ರಕಾರ, ಎಸ್‌ಸಿ, ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಹಿಂದುಳಿದ ವರ್ಗದವರಿಗೆ ಮೂರು ವರ್ಷ ವಯಸ್ಸಿನ ಸಡಿಲಿಕೆ ಇದೆ. ಅಂಗವಿಕಲರಿಗೆ ಒಟ್ಟು 10ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

Indian Post Recruitment 2023: Invites Applications For 40,889, Apply By Feb 16th, Details Inside

ವೇತನದ ವಿವರ
ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ (ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ) 12,000 ರೂ.ನಿಂದ 29,3800 ರೂಪಾಯಿ ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮ್ಯಾನೇಜರ್ ಹುದ್ದೆಗೆ 10,000ರೂ. ನಿಂದ 24,470ರೂ. ಸಂಬಳ ಇರಲಿದೆ.

ಅರ್ಜಿ ಶುಲ್ಕ/ ಆಯ್ಕೆ ಹೇಗಿರಲಿದೆ?
ಎಲ್ಲ ವರ್ಗದವರಿಗೂ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಕೆ ಶುಲ್ಕ 100 ರೂ. ಇರಲಿದೆ.
ಇನ್ನು ಆಯ್ಕೆ ವಿಧಾನ ನೋಡುವುದಾದರೆ, ಅಭ್ಯರ್ಥಿಗಳನ್ನು ಮೊದಲು ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ಮೆರಿಟ್ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 16ಕೊನೆಯ ದಿನವಾಗಿದೆ.

English summary
Indian Post Recruitment 2023: Invites applications for 40,889, apply before February 16th, details inside.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X