Indian Post Recruitment; ಕರ್ನಾಟಕದಲ್ಲಿ 94 ಹುದ್ದೆ, ವಿವರ
ಬೆಂಗಳೂರು, ನವೆಂಬರ್ 10; ಭಾರತೀಯ ಅಂಚೆ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮಾರ್ಗಸೂಚಿಗಳ ಅನ್ವಯ ಈ ನೇಮಕಾತಿ ನಡೆಯುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಲು 9/12/2023 ಕೊನೆಯ ದಿನವಾಗಿದೆ.
ಗ್ರೂಪ್ 'ಸಿ' ವೃಂದದ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕ್ರೀಡಾಪಟುಗಳು ಷರತ್ತು, ವಯೋಮಿತಿ, ವಿದ್ಯಾರ್ಹತೆಗೆ ಒಳಪಟ್ಟಿದ್ದರೆ ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಕರ್ನಾಟಕ ವೃತ್ತದಲ್ಲಿ ಒಟ್ಟು 94 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಹುದ್ದೆ, ವೇತನ ವಿವರಗಳು?; ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್‌ಮೆನ್, ಮೈಲ್ ಗಾರ್ಡ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು, ಅರ್ಜಿ ಶುಲ್ಕ ಪಾವತಿ ಮಾಡಲು 9/12/2023. 10/12/2023 ರಿಂದ 14/12/2023ರ ತನಕ ಅರ್ಜಿಗಳ ತಿದ್ದುಪಡಿಗೆ ಅವಕಾಶವಿದೆ.
ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗೆ ಹಂತ-4 25,500- 81,100 ರೂ., ಸಾರ್ಟಿಂಗ್ ಅಸಿಸ್ಟೆಂಟ್ ಹಂತ-4 25,500-81,100 ರೂ., ಪೋಸ್ಟ್‌ಮೆನ್ ಹಂತ-3 21,700-69,100 ರೂ., ಮೈಲ್ ಗಾರ್ಡ್ ಹಂತ-3 21,700-69,100 ರೂ. ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗೆ ಹಂತ-1 18,000-56,900 ರೂ. ವೇತನವನ್ನು ನಿಗದಿ ಮಾಡಲಾಗಿದೆ.
ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್‌ಮೆನ್, ಮೈಲ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 18-27 ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಹುದ್ದೆಗೆ 18-25 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಮಹಿಳಾ, ತೃತೀಯ ಲಿಂಗಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ವಿಶೇಷ ಪುಟ 9/12/2023ರಂದು ಮುಚ್ಚಲಿದೆ. ಆದರೆ ಅರ್ಜಿಗಳ ತಿದ್ದುಪಡಿಗಾಗಿ 5 ದಿನಗಳ ಕಾಲ ಮಾತ್ರ ತೆರೆದಿರಲಿದೆ. ಈ ಸಮಯದಲ್ಲಿ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿಲ್ಲ.
ಈ ಹುದ್ದೆಗಳಿಗೆ ಒಟ್ಟು 65 ಕ್ರೀಡೆಗಳನ್ನು ಪಟ್ಟಿ ಮಾಡಲಾಗಿದೆ. ಕ್ರೀಡಾಪಟುಗಳು ಷರತ್ತು, ವಯೋಮಿತಿ, ವಿದ್ಯಾರ್ಹತೆಗೆ ಒಳಪಟ್ಟಿದ್ದರೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://dopsportsrecruitment.cept.gov.in ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.












Click it and Unblock the Notifications