Indian Post Recruitment; ಫೆ.22ಕ್ಕೆ ನೇರ ಸಂದರ್ಶನ
ಬಳ್ಳಾರಿ, ಫೆಬ್ರವರಿ 18; ಬಳ್ಳಾರಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ನೇರ ಸಂದರ್ಶನವನ್ನು ಫೆಬ್ರವರಿ 22ರಂದು ಆಯೋಜನೆ ಮಾಡಲಾಗಿದೆ.
ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ. ಎಲ್. ಚಿತ್‍ಕೋಟೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅರ್ಹ ಅಭ್ಯರ್ಥಿಗಳು ಫೆ. 22 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇರ ಸಂದರ್ಶನಕ್ಕೆ ಆಗಮಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಮಾಹಿತಿ ನೀಡಲಾಗಿದೆ.

ಅರ್ಹತೆಗಳು; ಅರ್ಜಿದಾರರು ಕನಿಷ್ಠ 18 ವಯಸ್ಸಿನವರಾಗಿರಬೇಕು, ಗರಿಷ್ಠ ವಯೋಮಿತಿ ಇರುವುದಿಲ್ಲ. ವಿಮಾ ಉತ್ಪನ್ನ ಮಾರಾಟ ಮಾಡುವ ಅನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು 5000 ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಮಾಡುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. 5000ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 12ನೇ ತರಗತಿ ಉತ್ತೀರ್ಣರಾಗಿರಬೇಕು. ಇತರೆ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ನೇರ ಪ್ರತಿನಿಧಿ ಹುದ್ದೆಗೆ ನಿರುದ್ಯೋಗಿ, ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅರ್ಹರಾಗಿರುತ್ತಾರೆ.
ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು ಸರ್ಹರಾಗಿರುತ್ತಾರೆ. ಸಂದರ್ಶನ ಮೂಲಕ ಆಯ್ಕೆಯಾದ ಅಭ್ಯರ್ಥಿಯು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ 5000 ರೂ.ಗಳನ್ನು ಭದ್ರತಾ ಠೇವಣಿ ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿ, ಫೀಲ್ಡ್ ಆಫೀಸರ್‌ಗಳಿಗೆ ತಮ್ಮ ವ್ಯವಹಾರ ತಕ್ಕಂತೆ ಸೂಕ್ತ ಕಮೀಷನ್ ಇದ್ದು, ನಿಗದಿತ ವೇತನವಿರುವುದಿಲ್ಲ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ಅಧಿಕಾರಿ ಮಾರುತಿ. ವಿ. ಯು ಅವರನ್ನು ಮೊಬೈಲ್ ಸಂಖ್ಯೆ 9481694420 ಮೂಲಕ ಸಂಪರ್ಕಿಸಬಹುದು ಅಥವಾ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications