ಭಾರತೀಯ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಪ್ರಕಟಿಸಿದ ಕೇಂದ್ರ
ನವದೆಹಲಿ, ಫೆಬ್ರವರಿ 14: ಭಾರತೀಯ ರೈಲ್ವೆಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಭಾರಿ ಪ್ರಮಾಣದ ಉದ್ಯೋಗ ನೇಮಕಾತಿ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳ ನೇಮಕಾತಿ ಮಾಡಲಾಗುತ್ತಿದ್ದು, 2.3 ಲಕ್ಷ ಹೊಸ ಉದ್ಯೋಗಳನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತನ್ನ ಜಾಹೀರಾತಿನಲ್ಲಿ ತಿಳಿಸಿದೆ.
ಆರ್ಥಿಕವಾಗಿ ದುರ್ಬಲಗೊಂಡಿರುವ ವರ್ಗಗಳಿಗೆ ಮೊದಲ ಬಾರಿಗೆ ಶೇ 10ರ ಮೀಸಲಾತಿಯ ಪ್ರಯೋಜನದ ಬಹುದೊಡ್ಡ ನೇಮಕಾತಿ ಇದಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಕ್ರಮವಾಗಿ 34,000, 17,000, 62,000 ಮತ್ತು 23,000 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ನೇಮಕಾತಿ ಪ್ರಕ್ರಿಯೆಯ ಮೊದಲ ಹಂತವು 2019ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿದ್ದು, 2020ರ ಏಪ್ರಿಲ್-ಮೇನಲ್ಲಿ ಪೂರ್ಣಗೊಳ್ಳಲಿದೆ.
ಎರಡನೆಯ ಹಂತವು 2020ರ ಮೇ-ಜೂನ್ ತಿಂಗಳಿನಲ್ಲಿ ಆರಂಭವಾಗಲಿದ್ದು, 2021ರ ಜುಲೈ-ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ.
ಈ ಎಲ್ಲ ನೇಮಕಾತಿಗಳು ಪಾರದರ್ಶಕವಾಗಿರಲಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.












Click it and Unblock the Notifications