Indian railways: 3,015 ಹುದ್ದೆಗಳಿಗೆ ಅರ್ಜಿ ಆಹ್ವಾನ - ಕೊನೆ ದಿನಾಂಕ & ಅರ್ಹತೆಗಳ ವಿವರ ತಿಳಿಯಿರಿ

ಭಾರತೀಯ ರೈಲ್ವೆಯು ಪ್ರಯಾಣಿಕರಿಗಲ್ಲದೆ ಆಗಾಗ ಉದ್ಯೋಗಾಂಕ್ಷಿಗಳಿಗೂ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಇದೀಗ ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ ( West Central Railway) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗಾದರೆ ಕೊನೆಯ ದಿನಾಂಕ, ಅರ್ಹತೆಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 14 ಕೊನೆಯ ದಿನವಾಗಿದೆ. ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೆಬಿಪಿ ವಿಭಾಗದಲ್ಲಿ 1164, ಕೋಟಾ ವಿಭಾಗದಲ್ಲಿ 853, ಬಿಪಿಎಲ್ ವಿಭಾಗದಲ್ಲಿ 603, ಡಬ್ಲ್ಯುಆರ್‌ಎಸ್‌ನಲ್ಲಿ 196, ಸಿಆರ್‌ಡಬ್ಲ್ಯೂಎಸ್ ಬಿಪಿಎಲ್‌ನಲ್ಲಿ 170 ಮತ್ತು ಎಚ್ಕ್ಯೂ/ಜೆಬಿಪಿ ವಿಭಾಗದಲ್ಲಿ 29 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ.

Indian railways: Applications invited for 3,015 posts, know details

ಅರ್ಹತೆಗಳ ವಿವರ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ನ್ಯಾಷನಲ್ ಕೌನ್ಸಿಲ್ ವೊಕೇಶನಲ್ ಟ್ರೈನಿಂಗ್ ನೀಡುವ ಅಧಿಸೂಚಿತ ವ್ಯಾಪಾರದಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಕಡ್ಡಾಯವಾಗಿದೆ.

ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 15 ರಿಂದ 24 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಮೀಸಲಾತಿ ವರ್ಗಕ್ಕೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಸಾಮಾನ್ಯ ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅವರು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ. ಆನ್‌ಲೈನ್ ಮೂಲಕ ಮಾತ್ರ ಪಾವತಿಸಬೇಕು ಎಂದು ತಿಳಿಸಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಮೊದಲು ಪಶ್ಚಿಮ ಮಧ್ಯ ರೈಲ್ವೆಯ ಅಧಿಕೃತ ಪೋರ್ಟಲ್ wcr.indianrailways.gov.in ಭೇಟಿ ನೀಡಿ ನಂತರ ಮುಖಪುಟಕ್ಕೆ ಹೋಗಿ ಮತ್ತು 'ಡಬ್ಲ್ಯುಸಿಆರ್ ಅಪ್ರೆಂಟಿಸ್ -2023 ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ಅಧಿಸೂಚನೆ ವಿವರಗಳನ್ನು ಪರಿಶೀಲನೆ ಮಾಡಿ. 'ಅಪ್ಲೈ ಆನ್ಲೈನ್' ಲಿಂಕ್ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಿ. ಮೊದಲು ವೈಯಕ್ತಿಕ ವಿವರಗಳನ್ನು ನಮೂದಿಸಿ ಮತ್ತು ನೋಂದಾಯಿಸಿ.

ರಿಜಿಸ್ಟರ್ ಐಡಿ ಮತ್ತು ಪಾಸ್‌ವರ್ಡ್ ಸಹಾಯದಿಂದ ಲಾಗ್ ಇನ್ ಮಾಡಿ ಮತ್ತು ಅಪ್ಲಿಕೇಶನ್ ಫಾರ್ಮ್ ತೆರೆಯಿರಿ ಎಂದು ತಿಳಿಸಿದೆ. ಇನ್ನು ಎಲ್ಲಾ ವಿವರಗಳನ್ನು ನಮೂದಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಂತಿಮವಾಗಿ ಅರ್ಜಿಯನ್ನು ಸಲ್ಲಿಸಿ.

ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ: ಅಪ್ರೆಂಟಿಸ್ಶಿಪ್ ತರಬೇತಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹತ್ತನೇ ತರಗತಿ ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಸರಾಸರಿಯ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. 10 ನೇ ತರಗತಿ ಅಂಕಗಳು ಮತ್ತು ಐಟಿಐ ಅಂಕಗಳಿಗೆ ಸಮಾನ ವೇಟೇಜ್ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪಶ್ಚಿಮ ಮಧ್ಯ ರೈಲ್ವೆಯ ಇಲಾಖೆಗಳು, ಘಟಕಗಳು ಮತ್ತು ಕಾರ್ಯಾಗಾರಗಳಲ್ಲಿ ಅಪ್ರೆಂಟಿಸ್ ತರಬೇತಿ ನೀಡಲಾಗುವುದು ಎನ್ನುವ ಮಾಹಿತಿಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+