Indian Railway Jobs: ಭಾರತೀಯ ರೈಲ್ವೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ- ಸಂಬಳದ ವಿವರ ತಿಳಿಯಿರಿ
Indian Railway Jobs: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಆಗಾಗ ವಿಶೇಷ ರೈಲುಗಳನ್ನು ಬಿಡುತ್ತಲೇ ಇರುತ್ತದೆ. ಅಷ್ಟೇ ಅಲ್ಲದೆ, ಜೊತೆಗೆ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಪ್ರಕಟಣೆಯನ್ನು ಕೂಡ ಬಿಡುಗಡೆ ಮಾಡುತ್ತಾ ಬಂದಿದೆ. ಹಾಗೆಯೇ ಇದೀ ಇಲಾಖೆಯ ವಿವಿಧ ವಲಯಗಳಲ್ಲಿ ಜೂನಿಯರ್ ಎಂಜಿನಿಯರ್‌ಗಳು ಮತ್ತು ಇತರ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್, ಕೆಮಿಕಲ್ ಸೂಪರ್ವೈಸರ್ (ರಿಸರ್ಚ್) ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್ (ರಿಸರ್ಚ್) ಸೇರಿ ಒಟ್ಟು 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ ಅರ್ಜಿ ಸಲ್ಲಿಸುವ ವಿದಾನ ಹಾಗೂ ಸಂಬಳದ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜುಲೈ 30ರಿಂದ ಪ್ರಾರಂಭ ಆಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನಾಂಕ ಆಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ಆರ್‌ಆರ್‌ಬಿ ವಲಯ ವೆಬ್‌ಸೈಟ್‌ನಲ್ಲಿ ಸಕ್ರಿಯ ಲಿಂಕ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 36 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಡಿಪ್ಲೊಮಾ ಪಡೆದಿರಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
* ನಿಮ್ಮ ವಲಯಕ್ಕಾಗಿ ಅಧಿಕೃತ RRB ವೆಬ್‌ಸೈಟ್‌ಗೆ ಭೇಟಿ ನೀಡಿ.
* ಸಕ್ರಿಯಗೊಳಿಸಿದ ನಂತರ ಜೆಇ ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕದೊಂದಿಗೆ ನೋಂದಾಣಿ ಮಾಡಿಕೊಳ್ಳಿ.
* ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
* ಅರ್ಜಿ ಶುಲ್ಕ ಪಾವತಿಸಿ.
* ಬಳಿಕ ಅರ್ಜಿ ಸಲ್ಲಿಸಿದ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅಥವಾ ಸೇವ್ ಮಾಡಿಕೊಳ್ಳಬಹುದು.
ಅರ್ಜಿ ಶುಲ್ಕದ ವಿವರ: ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ, ಎಸ್ಸಿ, ಎಸ್ಟಿ, ಆರ್ಥಿಕವಾಗಿ ದುರ್ಬಲ ವರ್ಗಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿ, ಅರ್ಜಿ ನಮೂನೆಯಲ್ಲಿ ಯಾವುದೇ ತಿದ್ದುಪಡಿಗಳಿಗೆ 250 ರೂಪಾಯಿಗಳ ಶುಲ್ಕದ ಅಗತ್ಯವಿದೆ.
ಸಂಬಳದ ವಿವರ: ಇನ್ನು ಜೂನಿಯರ್ ಎಂಜಿನಿಯರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400 ರೂಪಾಯಿ ಸಂಬಳ ನೀಡಲಾಗುತ್ತದೆ. ಜೊತೆಗೆ ವಿವಿಧ ಭತ್ಯೆಗಳು ಮತ್ತು ಪ್ರಯೋಜನಗಳನ್ನು ನೀಡಲಾಗುವುದು ಎಂದು ತಿಳಿಸಿದೆ ಅಂತಾ ತಿಳಿದುಬಂದಿದೆ.












Click it and Unblock the Notifications