ರೈಲ್ವೆ ನೇಮಕಾತಿ 2026: 22,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ
ನವದೆಹಲಿ: ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಲೆವೆಲ್ -1ರ ಹುದ್ದೆಗಳು ಸೇರಿದಂತೆ ದೇಶಾದ್ಯಂತ ವಿವಿಧ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಹುದ್ದೆಗಳನ್ನು ಸೇರಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಹೇಗೆ? ಯಾವಾಗ ಅರ್ಜಿ ಸಲ್ಲಿಸಬಹುದು, ಮಾಸಿಕ ವೇತನ ಎಷ್ಟು? ನೇಮಕಾತಿ ವಿವರ ಮುಂದಿದೆ.
ಭಾರತೀಯ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿಗಳು (RRB) ಲೆವೆಲ್-1 ಹುದ್ದೆಗಳ ಭರ್ತಿಗೆ ಕೇಂದ್ರಿತ ಉದ್ಯೋಗ ಅಧಿಸೂಚನೆ (CEN) ಸಂಖ್ಯೆ 09/2025 ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಮೂಲಕ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು ಸುಮಾರು 22,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಏಳನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಅಡಿಯಲ್ಲಿ ಈ ನೇಮಕಾತಿ ನಡೆಯುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಿಲಾಗಿದೆ.

ಜ.21ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕಿದೆ. 2026ರ ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು http://www.rrbapply.gov.in ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕಿದೆ.
ಶೈಕ್ಷಣಿಕ ಅರ್ಹತೆ, ಮಾಸಿಕ ವೇತನ
ರೈಲ್ವೆ ಇಲಾಖೆಯ ಸದರಿ ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಾನದಂಡಗಳು ಸಂಬಂಧಿಸಿದಂತೆ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಲೆವೆಲ್-1 ರ ವಿವಿಧ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ವೇತನವಾಗಿ ಮಾಸಿಕ 18,000 ರೂಪಾಯಿ ನಿಗದಿಪಡಿಸಲಾಗಿದೆ. ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಅಭ್ಯರ್ಥಿಗಳ ವಯೋಮಿತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯೋಮಿತಿ 2026ರ ಜನವರಿ 1ರ ವೇಳೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷದೊಳಗೆ ಇರಬೇಕು. ಅಂಥವರು ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಜಾತಿ ಮೀಸಲಾತಿ ನಿಯಮಾನುಸಾರ ಆಯಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಲಕ್ಷಾಂತರ ಯುವಕರಿಗೆ ಈ ನೇಮಕಾತಿ ಅತ್ಯುತ್ತಮ ಅವಕಾಶ ಒದಗಿಸಲಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೆ ಕಾಯದೆ, ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ರೈಲ್ವೆ ನೇಮಕಾತಿ ಮಂಡಳಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗೆ ಒಮ್ಮೆ ಅಧಿಸೂಚನೆ ಓದಿಕೊಳ್ಳಿ ಹಾಗೂ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.
-
Indian Railway: ಬಣ್ಣದಿಂದಲೇ ರೈಲುಗಳ ವ್ಯತ್ಯಾಸ ಗುರುತಿಸುವುದು ಹೇಗೆ? -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications