1054 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಟೆಲಿಜನ್ಸ್ ಬ್ಯೂರೋ

ಬೆಂಗಳೂರು, ಅಕ್ಟೋಬರ್ 26 : ಇಂಟೆಲಿಜನ್ಸ್ ಬ್ಯೂರೋ 1054 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 10, 2018 ಕೊನೆಯ ದಿನವಾಗಿದೆ.

ಇಂಟೆಲಿಜನ್ಸ್ ಬ್ಯೂರೋ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 5200-20200 ಪ್ರತಿ ತಿಂಗಳು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಗಳಿಂದ ಪೂರ್ಣಗೊಳಿಸಿರಬೇಕು. ಯಾವುದಾದರೂ ಒಂದು ಪ್ರಾದೇಶಿಕ ಭಾಷಾ ಜ್ಞಾನ ಕಡ್ಡಾಯವಾಗಿದೆ.

Intelligence Bureau recruitment 2018 : Apply for 1054 Security Assistant Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ 50 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ/ಮಹಿಳಾ/ನಿವೃತ್ತ ಯೋಧರಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ನವೆಂಬರ್ 13 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+