ಮಾಧ್ಯಮ ಕಛೇರಿಗಳಲ್ಲಿ ತರಬೇತಿ: 20 ಸಾವಿರ ಶಿಷ್ಯ ವೇತನ, ಅರ್ಜಿ ಸಲ್ಲಿಕೆಗೆ ಅರ್ಹತೆಗಳು

ಬೆಂಗಳೂರು, ಆಗಸ್ಟ್ 10: ಕರ್ನಾಟಕ ಮಾಧ್ಯಮ ಅಕಾಡೆಮಿ, ಬೆಂಗಳೂರು ಪತ್ರಿಕಾಲಯಗಳಲ್ಲಿ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 2024-25ನೇ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ, ಈ ತರಬೇತಿ ಮಾಸಿಕ ತಲಾ 20,000 ರೂ.ಗಳ ಶಿಷ್ಯ ವೇತನವನ್ನು ಒಳಗೊಂಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಸ್ನಾತಕೋತ್ತರ/ ಪದವಿ ಮುಗಿಸಿದ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ, ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದು, ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ.

Internship In Media House With Stay Fund Apply Now

ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ. ಆ ದಿಸೆಯಲ್ಲಿ ಮಾಧ್ಯಮ ಕಚೇರಿಗಳ ಸಹಕಾರವನ್ನು ಪಡೆದು ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ತರಬೇತಿ ಹಮ್ಮಿಕೊಳ್ಳುವುದು ಅಕಾಡೆಮಿಯ ಹೊಸ ಯೋಜನೆಯಾಗಿದೆ.

ಅರ್ಜಿ ಹಾಕುವುದು ಹೇಗೆ?: ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ, ತರಬೇತಿ ಹೊಂದಿದ ವಿದ್ಯಾರ್ಥಿಗಳು ಪತ್ರಕರ್ತರಾಗುವಂತೆ ಸಿದ್ಧಪಡಿಸುವುದು ಅಕಾಡೆಮಿಯ ಉದ್ದೇಶವಾಗಿದೆ.

ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿಯನ್ನು ಮಾಸಿಕ ತಲಾ 20,000 ರೂ.ಗಳ ಶಿಷ್ಯ ವೇತನದೊಂದಿಗೆ ನೀಡಲಾಗುವುದು.

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ [email protected] ಗೆ ಇಮೇಲ್ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಕೆ ಮಾಡುವವರಿಗೆ 28 ವರ್ಷದ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಮಹಿಳಾ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುತ್ತದೆ.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಕರೆಯಲಾಗಿದೆ. ಆಸಕ್ತರು ಆಗಸ್ಟ್ 13ರಂದು ಮಧ್ಯಾಹ್ನ 1.30ರೊಳಗಾಗಿ ಅರ್ಜಿ ಸಲ್ಲಿಸಬೇಕಿದೆ. ಅದೇ ದಿನ ಸಂಜೆ 5.30ರವೆಗೆ ಎಲ್ಲಾ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತದೆ.

ಎಂಬಿಬಿಎಸ್ ವೈದ್ಯರ 2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು. ಕಿರಿಯ ಆರೋಗ್ಯ ಸಹಾಯಕ (ಆರೋಗ್ಯ ನಿರೀಕ್ಷಣಾಧಿಕಾರಿಗಳು) 3 ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು. ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.

ಈ ನೇಮಕಾತಿ ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ನಡೆಯಲಿದೆ. ಆಸಕ್ತರು ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ವಾಸ ಸ್ಥಳದ ಬಗ್ಗೆ ಮಹಾನಗರ ಪಾಲಿಕೆ/ ಸಂಬಂಧಿಸಿದ ಪಂಚಾಯತ್‌ನಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+