ಕೆಪಿಎಸ್‌ಸಿಯಿಂದ ವಿವಿಧ ಹುದ್ದೆಗಳಿಗೆ ಸಂದರ್ಶನ

ಬೆಂಗಳೂರು, ಜುಲೈ 18 : ಕರ್ನಾಟಕ ಲೋಕಸೇವಾ ಆಯೋಗ ಸಹಕಾರ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಜುಲೈ 27ರಿಂದ ಆಗಸ್ಟ್ 18ರವರೆಗೆ ಸಂದರ್ಶನವನ್ನು ಆಯೋಜಿಸಿದೆ.

ಸಹಕಾರ ಸಂಘಗಳು ನಿರೀಕ್ಷಕರು, ವಾರ್ತಾ ಇಲಾಖೆಯಲ್ಲಿನ ಸ್ವಾಗತಕಾರರು ಹಾಗೂ ಗ್ರಂಥಪಾಲಕರು, ಅಲ್ಪ ಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಮಹಿಳಾ ಶುಶ್ರೂಷಕಿಯರು, ಕನ್ನಡ ಭಾಷಾ ಶಿಕ್ಷಕರು, ಆಂಗ್ಲ ಭಾಷಾ ಶಿಕ್ಷಕರು, ಹಿಂದಿ ಭಾಷಾ ಶಿಕ್ಷಕರು, ಗಣಕಯಂತ್ರ ಶಿಕ್ಷಕರು, ದೈಹಿಕ ಶಿಕ್ಷಕರು ಉರ್ದು ಶಿಕ್ಷಕರು ಹಾಗೂ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರ ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ.

Interview for various jobs by KPSC, Bengaluru

ಸಂದರ್ಶನ ನಡೆಯುವ ಸ್ಥಳ : ಆಯೋಗದ ಕೇಂದ್ರ ಕಚೇರಿ, ಉದ್ಯೋಗ ಸೌಧ, ಬೆಂಗಳೂರು 560 001. [ಕೆಪಿಎಸ್‌ಸಿ ನೇಮಕಾತಿ : ಹುದ್ದೆ, ಅರ್ಹತೆಗಳ ಸಂಪೂರ್ಣ ವಿವರ]

ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಸೂಚನಾ ಪತ್ರಗಳನ್ನು ಈಗಾಗಲೇ ಕಳುಹಿಸಲಾಗಿದೆ. ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ, ಸಂದರ್ಶನದ ವೇಳೆ, ದಿನಾಂಕ ಇತ್ಯಾದಿ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ ನ್ನು ನೋಡಬಹುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ಪತ್ರ ಸ್ವೀಕೃತವಾಗದಿದ್ದಲ್ಲಿ ಸಂಬಂಧಿತ ದಾಖಲೆಗಳೊಂದಿಗೆ ಕೇಂದ್ರ ಕಚೇರಿಯನ್ನು ಸಂದರ್ಶನಕ್ಕೆ ನಿಗದಿಪಡಿಸಿರುವ ದಿನಾಂಕದೊಳಗೆ ಸಂಪರ್ಕಿಸಬಹುದು.

ವಿದ್ಯಾರ್ಥಿ ವೇತನ ದಿನಾಂಕ ವಿಸ್ತರಣೆ : ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದರು, ಸಿಖ್ ಮತ್ತು ಪಾರ್ಸಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.

1ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-08-2015 ಹಾಗೂ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2015. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ವಿಳಾಸ ಸಂಪರ್ಕಿಸಲು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+