ದಾವಣಗೆರೆ: ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ, ವಿವರಗಳು
ದಾವಣಗೆರೆ, ನವೆಂಬರ್ 14: ದಾವಣಗೆರೆ ಜಿಲ್ಲೆಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ವಸತಿ ಶಾಲೆಗಳು ಮಂಜೂರಾಗಿವೆ. ಈ ಶಾಲೆಗಳಿಗೆ ಅಗತ್ಯವಿರುವ ಬೋಧನಾ ಸಿಬ್ಬಂದಿಗಳನ್ನು ಭರ್ತಿ ಮಾಡಲು ಈಗ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹರು ನವಂಬರ್ 16 ರೊಳಗಾಗಿ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು, ವಿವರಗಳು ಇಲ್ಲಿವೆ.
ಜಿಲ್ಲೆಗೆ ಹೊಸದಾಗಿ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

ಅಭ್ಯರ್ಥಿಗಳು ನವಂಬರ್ 16ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08192-250022 ಸಂಖ್ಯೆಗೆ ಕರೆ ಮಾಡಬಹುದು.
ವಿವರಗಳು: ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನ್ನಡ ಶಿಕ್ಷಕರು ಅಗತ್ಯವಿದೆ. ವಿದ್ಯಾರ್ಹತೆ ಬಿಎ, ಬಿಇಡಿ, ಹುದ್ದೆ ಸಂಖ್ಯೆ-4.
ದಾವಣಗೆರೆಯ ವಿನೋಬನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಇಂಗ್ಲೀಷ್ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ಅಗತ್ಯವಿದೆ. ವಿದ್ಯಾರ್ಹತೆ ಬಿಎ, ಬಿಇಡಿ, ಹುದ್ದೆ ಸಂಖ್ಯೆ 4.
ಕೆಟಿಜೆ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಗಣಿತ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು ಬೇಕಾಗಿದ್ದಾರೆ. ವಿದ್ಯಾರ್ಹತೆ ಬಿಎಸ್ಸಿ, ಬಿಇಡಿ ಹುದ್ದೆ ಸಂಖ್ಯೆ 4.
ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗೆ ಉರ್ದು ಶಿಕ್ಷಕರು ಬೇಕಾಗಿದ್ದಾರೆ. ವಿದ್ಯಾರ್ಹತೆ ಬಿಎ, ಬಿಇಡಿ. ಹುದ್ದೆ ಸಂಖ್ಯೆ 4.
ಕೊಡಗಿನಲ್ಲಿ ಕೆಲಸ ಖಾಲಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ 'ಯುವ ಸ್ಪಂದನ' ಯೋಜನೆ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಪೊನ್ನಂಪೇಟೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಕೆ ಮಾಡಲು ವಯೋಮಿತಿ 21 ರಿಂದ 35 ವರ್ಷಗಳು. ಪದವಿ ಹಾಗೂ ಮೇಲ್ಪಟ್ಟ ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ನವೆಂಬರ್ 26ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272-220986, ಆನಂದ 9632104204, ಲಕ್ಷ್ಮಿ 7204363367 ಅನ್ನು ಸಂಪರ್ಕಿಸಬಹುದು.












Click it and Unblock the Notifications