ಛಾಯಾಚಿತ್ರ ಪತ್ರಿಕೋದ್ಯಮ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು ಫೆಬ್ರವರಿ 20: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ವತಿಯಿಂದ 2020-21ನೇ ಸಾಲಿನ ಶೈಕ್ಷಣಿಕ ಸಾಲಿನ ಛಾಯಾಚಿತ್ರ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
'ಮಾಸ್ಟರ್ ಆಫ್ ಆಟ್ಸ್ ಇನ್ ಕಮ್ಯುನಿಕೇಷನ್ ಅಂಡ್ ಜನರ್ಲಿಸಮ್' ಪದವಿಯನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಹಾಕಬಹುದಾಗಿದೆ.
ಕನ್ನಡ ಮತ್ತು ಸಂಸೃತಿ ಇಲಾಖೆ ನಿಗದಿಪಡಿಸಿರುವ ಕನ್ಸಲಿಡೆಟೆಡ್ ಪೇ ಆಧಾರದ ಮೇಲೆ 2020-21ನೇ ಶೈಕ್ಷಣಿಕ ಅವಧಿಗೆ ಮಾತ್ರ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತರು ಇದೇ ಫೆಬ್ರವರಿ 26, ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಾವಾ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 0821-2438931ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ ಡೀನ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications