ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

20 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಇಂಡಿಯನ್ ಓವರ್ ಸಿಸ್ ಬ್ಯಾಂಕ್

By Gururaj
|
Google Oneindia Kannada News

ಬೆಂಗಳೂರು, ಜುಲೈ 26 : ಇಂಡಿಯನ್ ಓವರ್ ಸಿಸ್ ಬ್ಯಾಂಕ್ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 4, 2018 ಕೊನೆಯ ದಿನವಾಗಿದೆ.

ಇಂಡಿಯನ್ ಓವರ್ ಸಿಸ್ ಬ್ಯಾಂಕ್ 20 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆಪಂಜಾಬ್ ಅಂಡ್ ಸಿಂದ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

ಮ್ಯಾನೇಜರ್ (Information Security), ಸೀನಿಯರ್ ಮ್ಯಾನೇಜರ್ (Information Security) ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು ಇಪ್ಪತ್ತು ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.

ಪಂಜಾಬ್ ಅಂಡ್ ಸಿಂದ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆಪಂಜಾಬ್ ಅಂಡ್ ಸಿಂದ್ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ

ಆನ್‌ಲೈನ್ ಮೂಲಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್‌ 4, 2018 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಳನ್ನು ಚಿತ್ರದಲ್ಲಿ ನೀಡಲಾಗಿದೆ.

ಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಂಕ್ ನೇಮಕಾತಿ, ವಿವರಗಳುಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಂಕ್ ನೇಮಕಾತಿ, ವಿವರಗಳು

ಅರ್ಜಿ ಸಲ್ಲಿಕೆಗೆ ವಿದ್ಯಾಭ್ಯಾಸ

ಅರ್ಜಿ ಸಲ್ಲಿಕೆಗೆ ವಿದ್ಯಾಭ್ಯಾಸ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ ಪದವಿ ಪಡೆದಿರಬೇಕು. ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಟೆಕ್ನಾಲಜಿ/ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್/Information Technology/ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್/Information security/ಸೈಬರ್ ಸೆಕ್ಯುರಿಟಿಯಲ್ಲಿ ಶೇ 60 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಜುಲೈ 1, 2018ಕ್ಕೆ ಅನ್ವಯವಾಗುವಂತೆ ಕೆಳಗಿನ ವಯೋಮಿತಿ ನಿಗದಿ ಮಾಡಲಾಗಿದೆ.

* ಮ್ಯಾನೇಜರ್ - 25 ರಿಂದ 35 ವರ್ಷ
* ಸೀನಿಯರ್ ಮ್ಯಾನೇಜರ್ - 25 ರಿಂದ 40 ವರ್ಷ

ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.
ಉಳಿದ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ.

ವೇತನ ಎಷ್ಟು?

ವೇತನ ಎಷ್ಟು?

* ಮ್ಯಾನೇಜರ್ ಹುದ್ದೆಗೆ 31705 ರಿಂದ 45950 ರೂ. (ಪ್ರತಿ ತಿಂಗಳು) ವೇತನ ನಿಗದಿ ಮಾಡಲಾಗಿದೆ.

* ಸೀನಿಯರ್ ಮ್ಯಾನೇಜರ್ ಹುದ್ದೆಗೆ 42020 ರಿಂದ 51490 ರೂ.(ಪ್ರತಿ ತಿಂಗಳು) ವೇತನ ನಿಗದಿಯಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Indian Overseas Bank (IOB) notification has been released on official website for the recruitment of 20 vacancies. Candidate who is looking for Manager (Information Security), Senior Manager (Information Security) & Various Vacancies can apply online before 4th August 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X