50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್
ಬೆಂಗಳೂರು, ಜೂನ್ 25 : ಐಓಸಿಎಲ್ 50 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 7, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) 50 ಜ್ಯೂನಿಯರ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ವೇತನ ಶ್ರೇಣಿ 10500 ರಿಂದ 24500 ಪ್ರತಿ ತಿಂಗಳು.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 12ನೇ ತರಗತಿ ಪರೀಕ್ಷೆಯಲ್ಲಿ ಶೇ 45ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ 40ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 26 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕವಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications