58 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್
ಬೆಂಗಳೂರು, ಮೇ 25 : ಐಓಸಿಎಲ್ 58 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 16, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಭಾರತೀಯ ತೈಲ ನಿಗಮ ನಿಯಮಿತ (ಐಓಸಿಎಲ್) 58 ಜ್ಯೂನಿಯರ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಿದೆ. ವೇತನ ಶ್ರೇಣಿ 10500 ರಿಂದ 24500 ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ವಿತ್ ಐಟಿಐ ಅನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ದ್ವಿತೀಯ ಪಿಯುಸಿಯನ್ನು ಶೇ 45ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಭಾರೀ ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ ವರ್ಗದವರಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ/ಓಬಿಸಿ 150 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.
ಪ್ರಮುಖ ಅಂಶಗಳು
* ಐಓಸಿಎಲ್‌ನಲ್ಲಿ ಉದ್ಯೋಗ
* ಒಟ್ಟು ಹುದ್ದೆಗಳು 58
* ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿಲ್ಲಿ ಕೆಲಸ
* 16 ಜೂನ್ 2018 ಅರ್ಜಿ ಸಲ್ಲಿಕೆಗೆ ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications