ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆಯಲ್ಲಿ 56 ಹುದ್ದೆಗಳಿವೆ
ಬೆಂಗಳೂರು, ಸೆ.26: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 56 ಕ್ಕೂ ಅಧಿಕ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10, 2022ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್
ಒಟ್ಟು ಹುದ್ದೆ: 56
ಹುದ್ದೆ ಹೆಸರು: Non- Executive
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 10, 2022
ಹುದ್ದೆ ವಿವರ:
ಹುದ್ದೆ ಹೆಸರು- ಒಟ್ಟು ಹುದ್ದೆ
ಇಂಜಿನಿಯರಿಂಗ್ ಸಹಾಯಕ(ಮೆಕ್ಯಾನಿಕಲ್) ಗ್ರೇಡ್ 4: 5
ಇಂಜಿನಿಯರಿಂಗ್ ಸಹಾಯಕ(ಎಲೆಕ್ಟ್ರಿಕಲ್) ಗ್ರೇಡ್ 4: 3
ಟೆಕ್ನಿಕಲ್ ಅಟೆಂಡೆಂಟ್ 1 ಗ್ರೇಡ್ 1: 8
ಇತರೆ: 40
ವಿದ್ಯಾರ್ಹತೆ:
ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಂತೆ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಿನಾಯತಿ ಸಿಗಲಿದೆ.
ಇಂಜಿನಿಯರಿಂಗ್ ಸಹಾಯಕ -IV(ಮೆಕ್ಯಾನಿಕಲ್): ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಮೂರು ವರ್ಷಗಳ ಡಿಪ್ಲೋಮಾ ಅಥವಾ ಐಟಿಐ ಒಂದು ವರ್ಷ 2 ವರ್ಷ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ). ಮೆಕ್ಯಾನಿಕಲ್ ಅಥವಾ ಆಟೋಮೊಬೈಲ್ ಡಿಪ್ಲೋಮಾದಲ್ಲಿ ಶೇ 55ರಷ್ಟು ಅಂಕ ಗಳಿಕೆ ಹಾಗೂ ಸಂಬಂಧಪಟ್ಟ ಟ್ರೇಡ್ ಅನುಭವ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಅಂಕಗಳಲ್ಲಿ ವಿನಾಯತಿ ಇರಲಿದೆ.

ಇಂಜಿನಿಯರಿಂಗ್ ಸಹಾಯಕ(ಎಲೆಕ್ಟ್ರಿಕಲ್) ಗ್ರೇಡ್ 4: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಮೂರು ವರ್ಷಗಳ ಡಿಪ್ಲೋಮಾ ಅಥವಾ ಐಟಿಐ ಒಂದು ವರ್ಷ 2 ವರ್ಷ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ). ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಶೇ 55ರಷ್ಟು ಅಂಕ ಗಳಿಕೆ ಹಾಗೂ ಸಂಬಂಧಪಟ್ಟ ಟ್ರೇಡ್ ಅನುಭವ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಅಂಕಗಳಲ್ಲಿ ವಿನಾಯತಿ ಇರಲಿದೆ.
ಟೆಕ್ನಿಕಲ್ ಅಟೆಂಡೆಂಟ್ 1 ಗ್ರೇಡ್ 1: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. SCVT/NCVT. ನೀಡಿದ ಎನ್ ಟಿ ಸಿ, ಐಟಿಐ ಟ್ರೇಡ್ ಪ್ರಮಾಣ ಪತ್ರ
ವಯೋಮಿತಿ: ವಿವಿಧ ಹುದ್ದೆಗಳಿಗೆ ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ ಕನಿಷ್ಠ 18 ರಿಂದ ಗರಿಷ್ಠ 26 ವರ್ಷ. ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಸಿಗಲಿದೆ.
ಶುಲ್ಕಪಾವತಿ ವಿಧಾನ: ಆನ್ ಲೈನ್ ಮೂಲಕ ಎಸ್ ಬಿ ಐ ಇ-ಕಲೆಕ್ಟ್
ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿ: 100 ರು
ಎಸ್ ಸಿ/ ಎಸ್ಟಿ/ ದಿವ್ಯಾಂಗ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12/09/2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10/10/2022
ಸಂಭಾವ್ಯ ಪರೀಕ್ಷೆ ದಿನಾಂಕ: 06/11/2022
ಅರ್ಜಿ ಸಲ್ಲಿಸುವ ವಿಧಾನ:
* ಇಂಡಿಯನ್ ಆಯಿಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ. (https://plapps.indianoil.in/)
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆಬ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ಅಭ್ಯರ್ಥಿಗಳು ತಮ್ಮ ಹುದ್ದೆ ಹಾಗೂ ಸಂಬಂಧಪಟ್ಟ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಆಯಿಲ್ ಇಂಡಿಯಾ ಅಧಿಕೃತ ವೆಬ್ ತಾಣದ ಕ್ಲಿಕ್ ಮಾಡಿ
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications