ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆಯಲ್ಲಿ 56 ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಸೆ.26: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 56 ಕ್ಕೂ ಅಧಿಕ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 10, 2022ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್
ಒಟ್ಟು ಹುದ್ದೆ: 56
ಹುದ್ದೆ ಹೆಸರು: Non- Executive
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 10, 2022

ಹುದ್ದೆ ವಿವರ:
ಹುದ್ದೆ ಹೆಸರು- ಒಟ್ಟು ಹುದ್ದೆ
ಇಂಜಿನಿಯರಿಂಗ್ ಸಹಾಯಕ(ಮೆಕ್ಯಾನಿಕಲ್) ಗ್ರೇಡ್ 4: 5
ಇಂಜಿನಿಯರಿಂಗ್ ಸಹಾಯಕ(ಎಲೆಕ್ಟ್ರಿಕಲ್) ಗ್ರೇಡ್ 4: 3
ಟೆಕ್ನಿಕಲ್ ಅಟೆಂಡೆಂಟ್ 1 ಗ್ರೇಡ್ 1: 8
ಇತರೆ: 40

SBI Recruitment 2022: 1673 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನSBI Recruitment 2022: 1673 ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಂತೆ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಿನಾಯತಿ ಸಿಗಲಿದೆ.

ಇಂಜಿನಿಯರಿಂಗ್ ಸಹಾಯಕ -IV(ಮೆಕ್ಯಾನಿಕಲ್): ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಮೂರು ವರ್ಷಗಳ ಡಿಪ್ಲೋಮಾ ಅಥವಾ ಐಟಿಐ ಒಂದು ವರ್ಷ 2 ವರ್ಷ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ). ಮೆಕ್ಯಾನಿಕಲ್ ಅಥವಾ ಆಟೋಮೊಬೈಲ್ ಡಿಪ್ಲೋಮಾದಲ್ಲಿ ಶೇ 55ರಷ್ಟು ಅಂಕ ಗಳಿಕೆ ಹಾಗೂ ಸಂಬಂಧಪಟ್ಟ ಟ್ರೇಡ್ ಅನುಭವ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಅಂಕಗಳಲ್ಲಿ ವಿನಾಯತಿ ಇರಲಿದೆ.

IOCL Recruitment 2022: Apply for 56 Non-Executive posts

ಇಂಜಿನಿಯರಿಂಗ್ ಸಹಾಯಕ(ಎಲೆಕ್ಟ್ರಿಕಲ್) ಗ್ರೇಡ್ 4: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. ಮೂರು ವರ್ಷಗಳ ಡಿಪ್ಲೋಮಾ ಅಥವಾ ಐಟಿಐ ಒಂದು ವರ್ಷ 2 ವರ್ಷ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ). ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಶೇ 55ರಷ್ಟು ಅಂಕ ಗಳಿಕೆ ಹಾಗೂ ಸಂಬಂಧಪಟ್ಟ ಟ್ರೇಡ್ ಅನುಭವ. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ ಅಂಕಗಳಲ್ಲಿ ವಿನಾಯತಿ ಇರಲಿದೆ.

ಟೆಕ್ನಿಕಲ್ ಅಟೆಂಡೆಂಟ್ 1 ಗ್ರೇಡ್ 1: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10 ಹಾಗೂ 12ನೇ ತರಗತಿ ಪಾಸ್. SCVT/NCVT. ನೀಡಿದ ಎನ್ ಟಿ ಸಿ, ಐಟಿಐ ಟ್ರೇಡ್ ಪ್ರಮಾಣ ಪತ್ರ

ವಯೋಮಿತಿ: ವಿವಿಧ ಹುದ್ದೆಗಳಿಗೆ ಆಯಿಲ್ ಇಂಡಿಯಾ ನೇಮಕಾತಿ ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ ಕನಿಷ್ಠ 18 ರಿಂದ ಗರಿಷ್ಠ 26 ವರ್ಷ. ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಎಸ್ ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಸಿಗಲಿದೆ.

ಶುಲ್ಕಪಾವತಿ ವಿಧಾನ: ಆನ್ ಲೈನ್ ಮೂಲಕ ಎಸ್ ಬಿ ಐ ಇ-ಕಲೆಕ್ಟ್
ಸಾಮಾನ್ಯ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿ: 100 ರು
ಎಸ್ ಸಿ/ ಎಸ್ಟಿ/ ದಿವ್ಯಾಂಗ ಅಭ್ಯರ್ಥಿ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12/09/2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10/10/2022
ಸಂಭಾವ್ಯ ಪರೀಕ್ಷೆ ದಿನಾಂಕ: 06/11/2022

ಅರ್ಜಿ ಸಲ್ಲಿಸುವ ವಿಧಾನ:
* ಇಂಡಿಯನ್ ಆಯಿಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ. (https://plapps.indianoil.in/)
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆಬ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ಅಭ್ಯರ್ಥಿಗಳು ತಮ್ಮ ಹುದ್ದೆ ಹಾಗೂ ಸಂಬಂಧಪಟ್ಟ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಆಯಿಲ್ ಇಂಡಿಯಾ ಅಧಿಕೃತ ವೆಬ್ ತಾಣದ ಕ್ಲಿಕ್ ಮಾಡಿ

English summary
Indian Oil Corporation Limited (IOCL) is inviting applications for the 56 Engineering Assistant and Technical Attendant-1 posts at Pipelines Division. The last date to apply is October 10, 2022. Interested candidates can apply through the official website, iocl.com.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X