ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಯಲ್ಲಿ ಉದ್ಯೋಗ; ಡಿಪ್ಲೊಮೊ, ಬಿಎಸ್.ಸಿ ಪದವೀದರರಿಗೆ ಅವಕಾಶ
ಬೆಂಗಳೂರು, ಮೆ 18: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. 19 ವಿವಿಧ ಹುದ್ದೆಗಳಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮೇ 28, 2022ರೊಳಗೆ, ಅಧಿಕೃತ ವೆಬ್ಸೈಟ್ iocl.com ನಲ್ಲಿ ಸಲ್ಲಿಸಬಹುದು.
ಆನ್ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯು ಮೇ 07, 2022 ರಂದು ಪ್ರಾರಂಭವಾಗಿದೆ. ಹುದ್ದೆಗಳಿಗೆ ಅರ್ಹತೆ ಪಡೆಯಲು ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 40% ಅಂಕಗಳನ್ನು ಗಳಿಸಬೇಕು. ಡಿಪ್ಲೊಮಾ / ಬಿಎಸ್.ಸಿ./ ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ವಿದ್ಯಾರ್ಹತೆಗೆ ತಕ್ಕ ಪೋಸ್ಟ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ವೆಬ್ಸೈಟ್ನಲ್ಲಿ ತಿಳಿಸಿದೆ.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್
ಒಟ್ಟು ಹುದ್ದೆ: 19
ಹುದ್ದೆ ಹೆಸರು: ಜೂನಿಯರ್ ಇಂಜಿನಿಯರ್ ಅಸಿಸ್ಟೆಂಟ್-IV(ಪ್ರೊಡಕ್ಷನ್)18 ಪೋಸ್ಟ್
ಜೂನಿಯರ್ ಇಂಜಿನಿಯರ್ ಅಸಿಸ್ಟೆಂಟ್-IV(ಇನ್ಸ್ಟ್ರ್ಯಮೆಂಟೆಷನ್( 1 ಪೋಸ್ಟ್ ಸಂಬಳ ನಿರಿಕ್ಷೆ: 25,000-1,05,000 ರೂ
ವಿದ್ಯಾರ್ಹತೆ: SC/ST/EXM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ಪಾವತಿಯಿಂದ ವಿನಾಯಿತಿ ನೀಡಲಾಗಿದೆ
IOCL ನೇಮಕಾತಿ 2022 ಅರ್ಹತಾ ಮಾನದಂಡ
ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕೆಮಿಕಲ್/ ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಇಂಜಿನಿಯರಿಂಗ್ ನಲ್ಲಿ 3 ವರ್ಷಗಳ ಡಿಪ್ಲೊಮಾ ಅಥವಾ ಬಿ.ಎಸ್ಸಿ. ( (Maths, Physics, Chemistry or Industrial Chemistry) ಪದವಿ. ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕ ಮತ್ತು ಪರಿಶಿಷ್ಠ ಜಾತಿ ಅಭ್ಯರ್ಥಿಗಳು ಶೇ. 45% ರಷ್ಟು ಅಂಕಗಳನ್ನು ಪಡೆದಿರಬೇಕು.
ಪ್ರಮುಖ ದಿನಾಂಕ
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭ: 07/05/2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28/05/2022

ಅರ್ಜಿ ಸಲ್ಲಿಸುವ ವಿಧಾನ:
* ಇಂಡಿಯನ್ ಆಯಿಲ್ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ. (https://plapps.indianoil.in/) *
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಅಪ್ರೆಂಟಿಸ್ ಶಿಪ್ ಇಂಡಿಯಾ ವೆನ್ ತಾಣದಲ್ಲಿ ಲಾಗಿನ್ ಆಗಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ಅಭ್ಯರ್ಥಿಗಳು ತಮ್ಮ ಹುದ್ದೆ ಹಾಗೂ ಸಂಬಂಧಪಟ್ಟ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿ ಪಡೆಯಲು ಇಂಡಿಯನ್ ಆಯಿಲ್ ಸಂಸ್ಥೆ ಹೊರಡಿಸಿರುವ ಅಧಿಕೃತ ನೋಟಿಫಿಕೇಷನ್ ಓದಿ.
(ಒನ್ಇಂಡಿಯಾ ಸುದ್ದಿ)